ಭ್ರೂಣಾವಸ್ಥೆಯಿಂದ ಮರಣದ ತನಕ ಕಾನೂನು ನಮ್ಮನ್ನು‌ ಪ್ರಭಾವಿಸುತ್ತದೆ : ಬಿ.ನಾಗರಾಜ್

ಉಡುಪಿ: ರಾಜ್ಯ ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ,ಉಡುಪಿ ವಕೀಲರ ಸಂಘ ಮತ್ತು ಸರಕಾರಿ ಬಾಲಕಿಯರ ಪ್ರೌಢಶಾಲೆ ಮತ್ತು‌ ಕಾಲೇಜಿನ ಆಶ್ರಯದಲ್ಲಿ ಕಾನೂನು ಅರಿವು ಕಾರ್ಯಕ್ರಮ ನಡೆಯಿತು.ಸರಕಾರಿ ಬಾಲಕಿಯರ ಕಾಲೇಜಿನಲ್ಲಿ ನಡೆದ ಕಾರ್ಯಕ್ರಮವನ್ನು ಹಿರಿಯ ಸಿವಿಲ್ ನ್ಯಾಯಾಧೀಶೆ ಶರ್ಮಿಲಾ. ಎಸ್ ಉದ್ಘಾಟಿಸಿದರು.

ಕಾರ್ಯಕ್ರಮದಲ್ಲಿ ಮಾತನಾಡಿದ ವಕೀಲರ ಸಂಘದ ಅಧ್ಯಕ್ಷ ಬಿ.ನಾಗರಾಜ್ ,ಮಕ್ಕಳ ಹಕ್ಕುಗಳು ಮತ್ತು ರಕ್ಷಣೆ ಕುರಿತು ಮಾಹಿತಿ ನೀಡಿದರು.ಭ್ರೂಣಾವಸ್ಥೆಯಲ್ಲಿರುವ ಮಗುವಿನಿಂದ ಹಿಡಿದು ಮರಣದ ತನಕ ನಮ್ಮನ್ನು ಕಾನೂನು‌ ಯಾವ ರೀತಿ ಪ್ರಭಾವಿಸುತ್ತದೆ ಎಂಬ ಬಗ್ಗೆ ಕೂಲಂಕುಷವಾಗಿ ತಿಳಿಸಿದರು.ಬೇರೆ ಬೇರೆ ರೀತಿಯ ಮಕ್ಕಳ ಹಕ್ಕುಗಳ ರಕ್ಷಣೆ ಕುರಿತು ,ಫೋಕ್ಸೋ ಕಾಯಿದೆ ಬಗ್ಗೆ ,ಮಕ್ಕಳ ರಕ್ಷಣೆ ನ್ಯಾಯ ವ್ಯವಸ್ಥೆ ಬಗ್ಗೆ ವಿದ್ಯಾರ್ಥಿಗಳಿಗೆ ಸವಿವರವಾಗಿ ಮಾಹಿತಿ ನೀಡಿದರು.

ಇನ್ನು ಹಿರಿಯ ಸಿವಿಲ್ ನ್ಯಾಯಾಧೀಶೆ ಶರ್ಮಿಲಾ ಎಸ್ ,ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯದ ಬಗ್ಗೆ ಮಾತನಾಡಿ ,ಪ್ರತಿಯೊಬ್ಬರಿಗೂ ಕಾನೂನಿನ ಮಾಹಿತಿ ಮತ್ತು ಜ್ಞಾನದ ಅವಶ್ಯಕತೆ ಇದೆ.ಮಕ್ಕಳು ಇದರ ಬಗ್ಗೆ ತಿಳಿದುಕೊಳ್ಳಬೇಕಾಗಿದೆ.ಕಾನೂನು ಸೇವಾ ಪ್ರಾಧಿಕಾರ ಈ ನಿಟ್ಡಿನಲ್ಲಿ ಯಾವ ರೀತಿ‌ ಕಾರ್ಯ ನಿರ್ವಹಿಸುತ್ತಿದೆ ಎಂದು ಸವಿವರವಾಗಿ ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ವಕೀಲ ಗಿರೀಶ್ ಐತಾಳ್ ,ಕಾಲೇಜು ಪ್ರಾಂಶುಪಾಲೆ ಜಯಲಕ್ಷ್ಮೀ ಮತ್ತಿತರರು ಉಪಸ್ಥಿತರಿದ್ದರು.

 
 
 
 
 
 
 
 
 
 
 

Leave a Reply