ಭಾರತರತ್ನ ಡಾ. ಬಿ. ಆರ್. ಅಂಬೇಡ್ಕರ್ 130ನೇ ಜನ್ಮದಿನಾಚರಣೆ – ಶಾಸಕ ರಘುಪತಿ ಭಟ್ ಭಾಗಿ

ಉಡುಪಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ನಗರಸಭೆ, ಸಮಾಜ ಕಲ್ಯಾಣ ಇಲಾಖೆ ಹಾಗೂ ಪ.ಜಾತಿ/ಪ.ಪಂಗಡಗಳ ಸಂಘಟನೆಗಳು ಉಡುಪಿ ಜಿಲ್ಲೆಯ ಸಂಯುಕ್ತ ಆಶ್ರಯದಲ್ಲಿ ಮಣಿಪಾಲ ರಜತಾದ್ರಿಯ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ “ಸಂವಿಧಾನ ಶಿಲ್ಪಿ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ 130ನೇ ಜನ್ಮದಿನಾಚರಣೆ” ಆಯೋಜಿಸಲಾಗಿತ್ತು. ಶಾಸಕ ಶ್ರೀ ಕೆ. ರಘುಪತಿ ಭಟ್ ಭಾಗವಹಿಸಿ ಡಾ. ಬಿ. ಆರ್. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿದರು.

 ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಜಿಲ್ಲಾ ಪಂಚಾಯತ್ ಅಧ್ಯಕ್ಷ ದಿನಕರ್ ಬಾಬು, ಉಪಾಧ್ಯಕ್ಷ ಶೀಲಾ ಕೆ ಶೆಟ್ಟಿ, ನಗರಸಭಾಧ್ಯಕ್ಷೆ ಸುಮಿತ್ರಾ ಆರ್ ನಾಯಕ್, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ರಾಘವೇಂದ್ರ ಕಿಣಿ, ಜಿಲ್ಲಾ ಪಂಚಾಯತ್ ಸದಸ್ಯೆ ಶಿಲ್ಪಾ ಸುವರ್ಣ, ಉಡುಪಿ ತಾಲೂಕು ಪಂಚಾಯತ್ ಅಧ್ಯಕ್ಷೆ ಸಂಧ್ಯಾ ಕಾಮತ್, ಬೈಂದೂರು ಸರಕಾರಿ ಪದವಿ ಪೂರ್ವ ಕಾಲೇಜು ಉಪನ್ಯಾಸಕ ಡಾ. ಪ್ರದೀಪ್ ಕೆಂಚನೂರು ಹಾಗೂ ಜಿಲ್ಲಾಧಿಕಾರಿ ಜಿ ಜಗದೀಶ್, ಜಿ. ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ನವೀನ್ ಭಟ್ ವೈ, ಪೋಲಿಸ್ ವರಿಷ್ಠಾಧಿಕಾರಿ ಎನ್. ವಿಷ್ಣುವರ್ಧನ್, ನಗರಸಭೆ ಪೌರಾಯುಕ್ತ ಉದಯ್ ಶೆಟ್ಟಿ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಅನಿತಾ ವಿ. ಮಡ್ಲೂರ್ ಮತ್ತು ಪ್ರಮುಖರು ಉಪಸ್ಥಿತರಿದ್ದರು. 

 
 
 
 
 
 
 
 
 
 
 

Leave a Reply