ಅಂಗಳದಲ್ಲಿ 11 ತಿಂಗಳ ಮಗುವಿಗೆ ಊಟ ಮಾಡಿಸುತ್ತಿದ್ದಾಗ ತಲೆಗೆ ತೆಂಗಿನಕಾಯಿ ಬಿದ್ದು ಮಗು ಸಾವು

ಹಾವೇರಿ: ಸಣ್ಣ ಮಕ್ಕಳನ್ನು ನೋಡಿಕೊಳ್ಳುವಾಗ ಎಷ್ಟು ಜಾಗರೂಕತೆಯಿಂದ ಇದ್ದರೂ ಕಡಿಮೆಯೇ ಎಂಬುದಕ್ಕೆ ಈ ಕರುಣಾಜನಕ ಘಟನೆ ಮತ್ತೊಂದು ನಿದರ್ಶನವಾಗಿದೆ.ಅಂಗಳದಲ್ಲಿ ಆಟವಾಡುತ್ತಿದ್ದಾಗ ತಲೆಯ ಮೇಲೆ ತೆಂಗಿನಕಾಯಿ ಬಿದ್ದ ಪರಿಣಾಮ 11 ತಿಂಗಳ ಮಗು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಹಿರೆಕೇರೂರು ತಾಲೂಕಿನ ಹಂಸಭಾವಿಯಲ್ಲಿ ನಡೆದಿದೆ.

ಮೃತಪಟ್ಟ ಮಗು ಹಂಸಭಾವಿಯ ಮಲ್ಲಿಕಾರ್ಜುನ ಮತ್ತು ಮಾಲಾ ದಂಪತಿಗಳ ಮಗುವಾಗಿದ್ದು, ಮನೆಯ ಎದುರು ಮಗುವನ್ನು ಆಟವಾಡಿಸುತ್ತಾ ಊಟ ಮಾಡಿಸುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.

ಆಸ್ಪತ್ರೆಗೆ ಸೇರಿಸಿದ್ದ ಮಗು ನಿನ್ನೆ ರಾತ್ರಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದೆ.ಮಗುವನ್ನು ಕಳೆದುಕೊಂಡಿರುವ ಪೋಷಕರ ರೋದನೆ ಮುಗಿಲು ಮುಟ್ಟಿದೆ.

 
 
 
 
 
 
 
 
 
 
 

Leave a Reply