ಮದ್ಯ ಬಂದ್

ಕುಂದಾಪುರ ಪೊಲೀಸ್ ಠಾಣಾ ಸರಹದ್ದಿನ ಖಾರ್ವಿಕೇರಿ ಹಾಗೂ ಕೋಡಿ ಪರಿಸರದಲ್ಲಿ ಹೋಳಿ ಹಬ್ಬವನ್ನು ಆಚರಿಸಲಿರುವ ಸಂದರ್ಭದಲ್ಲಿ ಬಾರ್ ಮತ್ತು ವೈನ್‌ಶಾಪ್‌ಗಳು ತೆರೆದಿದ್ದಲ್ಲಿ, ಮದ್ಯಪಾನಾಸಕ್ತರು ಮದ್ಯಪಾನಮಾಡಿ ಗಲಭೆಮಾಡುವ ಸಾಧ್ಯತೆ ಇದ್ದು ಈ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ ಮತ್ತು ಸಾರ್ವಜನಿಕ ಶಾಂತಿ ಕಾಪಾಡುವ ದೃಷ್ಟಿಯಿಂದ ,  ಕುಂದಾಪುರ ಪೊಲೀಸ್ ಠಾಣಾ ಸರಹದ್ದಿನ ಕಸಬಾ, ವಡೇರಹೋಬಳಿ ಹಾಗೂ ಹಂಗಳೂರು ಗ್ರಾಮಗಳಲ್ಲಿ ಮದ್ಯ ಮಾರಾಟದ ಸನ್ನದುಗಳನ್ನು ಹೊಂದಿರುವ ಬಾರ್ & ರೆಸ್ಟೋರೆಂಟ್ ಮತ್ತು ವೈನ್ ಶಾಪ್‌ಗಳ ಮದ್ಯ ಮಾರಾಟವನ್ನು ದಿನಾಂಕ:08-03-2023 ರಂದು ಬೆಳಿಗ್ಗೆ 6:00 ಗಂಟೆಯಿಂದ ರಾತ್ರಿ 12.00 ಗಂಟೆಯ ತನಕ ಅಬಕಾರಿ ಸನ್ನದುಗಳನ್ನು ಮುಚ್ಚಲು ಹಾಗೂ ಮೇಲೆ ತಿಳಿಸಲಾದ ದಿನಾಂಕದಂದು  ಈ ವ್ಯಾಪ್ತಿಯಲ್ಲಿ ಒಣದಿನ( Dry Day) ಎಂದು ಘೋಷಿಸಿ, ಮದ್ಯ ಮಾರಾಟವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಆದೇಶಿಸಿದ್ದಾರೆ.

 
 
 
 
 
 
 
 
 
 
 

Leave a Reply