ಯಾಂತ್ರಿಕೃತ ಭತ್ತ ಬೇಸಾಯ (ಯಂತ್ರಶ್ರೀ) ಮತ್ತು ಹಡಿಲು ಭೂಮಿ ಪುನಶ್ಚೇತನ ಯೋಜನೆಗಳಿಗೆ ವಿದ್ಯುಕ್ತ ಚಾಲನೆ ಕಾರ್ಯಕ್ರಮ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ರಿ.) ಧರ್ಮಸ್ಥಳ 2022 – 23 ನೇ ಸಾಲಿನಲ್ಲಿ ರಾಜ್ಯದ 20,000 ಹೆಕ್ಟೇರ್ ಪ್ರದೇಶದಲ್ಲಿ ಅನುಷ್ಠಾನಗೊಳ್ಳಲಿರುವ “ಯಾಂತ್ರಿಕೃತ ಭತ್ತ ಬೇಸಾಯ (ಯಂತ್ರಶ್ರೀ) ಮತ್ತು ಹಡಿಲು ಭೂಮಿ ಪುನಶ್ಚೇತನ ಯೋಜನೆಗಳಿಗೆ ವಿದ್ಯುಕ್ತ ಚಾಲನೆ ಕಾರ್ಯಕ್ರಮ” ಇಂದು ದಿನಾಂಕ 28-06-2022 ರಂದು ಬಾರ್ಕೂರು ಕೂಡ್ಲಿ ಉಡುಪರ ಮನೆಯಲ್ಲಿ ನೆರವೇರಿತು.

ಶಾಸಕರಾದ ಕೆ. ರಘುಪತಿ ಭಟ್ ರವರು ಭಾಗವಹಿಸಿ ಯಂತ್ರಶ್ರೀ ಮಾಹಿತಿ ಪತ್ರದ ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾll. ಡಿ. ವೀರೇಂದ್ರ ಹೆಗ್ಗಡೆ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕೇಂದ್ರ ಕೃಷಿ ಹಾಗೂ ರೈತ ಕಲ್ಯಾಣ ರಾಜ್ಯ ಸಚಿವರಾದ ಶೋಭಾ ಕರಂದ್ಲಾಜೆ, ಸಮಾಜ ಕಲ್ಯಾಣ ಇಲಾಖೆ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ಮಾಜಿ ಸಚಿವರಾದ ವಿನಯ್ ಕುಮಾರ್ ಸೊರಕೆ, ರಾಜ್ಯೋತ್ಸವ ಕೃಷಿ ಪ್ರಶಸ್ತಿ ವಿಜೇತರಾದ ಬಿ. ಶಾಂತಾರಾಮ್ ಶೆಟ್ಟಿ, ಯಡ್ತಾಡಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಸವಿತಾ ದೇವಾಡಿಗ, ಕೂಡ್ಲಿ ಶ್ರೀ ಜನಾರ್ಧನ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಕೆ. ವೆಂಕಟರಮಣ ಉಡುಪ, ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ಕೆಂಪೇಗೌಡ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ರಿ.) ಧರ್ಮಸ್ಥಳ ಇದರ ಪದಾಧಿಕಾರಿಗಳು ಉಪಸ್ಥಿತರಿದ್ದರು.

 
 
 
 
 
 
 
 
 

Leave a Reply