ಶಟ್ಲ್ ಬ್ಯಾಡ್ಮಿಂಟನ್ ಪಂದ್ಯಾಟದ ಫಲಿತಾಂಶ.

ಶಾಲಾ ಶಿಕ್ಷಣ ಇಲಾಖೆ ಉಡುಪಿ ಜಿಲ್ಲೆ ಹಾಗೂ ಉಡುಪಿ ತಾಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಆಶ್ರಯದಲ್ಲಿ ಉಡುಪಿ ಅಜ್ಜರಕಾಡು ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ಮೈಸೂರು ವಿಭಾಗ ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಟ್ಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ಕೊಡಗು,ದ ಕನ್ನಡ, ಹಾಸನ ಹಾಗೂ ಮೈಸೂರು ತಂಡಗಳು ವಿವಿಧ ವಿಭಾಗದಲ್ಲಿ ಪ್ರಶಸ್ತಿಯನ್ನು ಪಡೆದುಕೊಂಡವು.

ಸಮಾರೋಪ ಸಮಾರಂಭದಲ್ಲಿ ಮಾಜಿ ಶಾಸಕ ರಘುಪತಿ ಭಟ್ ವಿಜೇತ ತಂಡಗಳಿಗೆ ಪ್ರಶಸ್ತಿ ಪತ್ರ ಮತ್ತು ಟ್ರೋಫಿಗಳನ್ನು ವಿತರಿಸಿದರು.

ಈ ಸಂದರ್ಭದಲ್ಲಿ ಡಿಡಿಪಿಐ ಗಣಪತಿ,ಜಿಲ್ಲಾ ಯುವ ಸಬಲೀಕರಣ ಹಾಗೂ ಕ್ರೀಡಾಧಿಕಾರಿ ರೋಶನ್ ಕುಮಾರ್ ಶೆಟ್ಟಿ ತಾಲೂಕು ದೈ ಶಿ ಪರಿವೀಕ್ಷಣಾಧಿಕಾರಿಗಳಾದ ರವಿಚಂದ್ರ ಕಾರಂತ್ ರವೀಂದ್ರ ನಾಯ್ಕ್ ಒಳಕಾಡು ಪ್ರೌಢಶಾಲಾ ಮುಖ್ಯಶಿಕ್ಷಕಿ ನಿರ್ಮಲಾ ಬಿ, ತಾಲೂಕು ಯುವಜನ ಸೇವಾ ಕ್ರೀಡಾಧಿಕಾರಿ ರಿತೇಶ್ ಕುಮಾರ್ ಶೆಟ್ಟಿ ನಿವೃತ್ತ ದೈಹಿಕ ಶಿಕ್ಷಣಾಧಿಕಾರಿ ವಿಶ್ವನಾಥ ಬಾಯರಿ,ಜಿಲ್ಲಾ ದೈ ಶಿ ಶಿಕ್ಷಕ ಸಂಘದ ಅಧ್ಯಕ್ಷ ವಿಜಯಕುಮಾರ್ ಶೆಟ್ಟಿ ಸಂಘದ ಪದಾಧಿಕಾರಿಗಳಾದ ಸುಭಾಸ್ ಹೆಗ್ಡೆ, ವಸಂತ ಜೋಗಿ,ವೇಣುಗೋಪಾಲ್ ಮುಂತಾದವರು ಉಪಸ್ಥಿತರಿದ್ದರು.

ಪ್ರಾರಂಭದಲ್ಲಿ ಜಿಲ್ಲಾ ದೈ ಶಿ ಅಧಿಕಾರಿ ಗೋಪಾಲ ಶೆಟ್ಟಿ ಸ್ವಾಗತಿಸಿದರು.ತಾಲೂಕು ದೈ ಶಿ ಸಂಘದ ಅಧ್ಯಕ್ಷ ಚಂದ್ರಶೇಖರ ಸುವರ್ಣ ವಂದಿಸಿದರು.ಶಿಕ್ಷಕ ಕಿರಣ್ ಕುಮಾರ್ ಕಾರ್ಯಕ್ರಮ ನಿರೂಪಿಸಿದರು. ಫಲಿತಾಂಶ..
ಪ್ರಾಥಮಿಕ ಶಾಲಾ ಬಾಲಕರು ಕೊಡಗು(ಪ್ರ)ಉಡುಪಿ (ದ್ವಿ) ಪ್ರಾಥಮಿಕ ಶಾಲಾ ಬಾಲಕಿಯರು

ದ ಕನ್ನಡ (ಪ್ರ)ಹಾಸನ( ದ್ವಿ)

ಪ್ರೌಢಶಾಲಾ ಬಾಲಕರು

ಹಾಸನ( ಪ್ರ) ಚಿಕ್ಕಮಗಳೂರು ( ದ್ವಿ)
ಪ್ರೌಢಶಾಲಾ ಬಾಲಕಿಯರು
ಮೈಸೂರು (ಪ್ರ) ಉಡುಪಿ (ದ್ವಿ)
ಮೈಸೂರು ವಿಭಾಗದ ಎಂಟು ಜಿಲ್ಲೆಗಳ 32 ತಂಡಗಳು ಪಂದ್ಯಾಟದಲ್ಲಿ ಭಾಗವಹಿಸಿದ್ದವು.
 
 
 
 
 
 
 
 
 
 
 

Leave a Reply