ಕಾರ್ಕಳ: ಬಡಗಬೆಟ್ಟು ಕ್ರೆಡಿಟ್ ಕೋ-ಆಪರೇಟಿವ್‌ ಸೊಸೈಟಿಯ ಶಾಖೆ ಉದ್ಘಾಟನೆ

ಉಡುಪಿ: ರಾಷ್ಟ್ರೀಕೃತ ಬ್ಯಾಂಕ್‌‌ ಗಳಂತೆಯೆ ಗ್ರಾಹಕರಿಗೆ ಗುಣಮಟ್ಟದ ಸೇವೆ ನೀಡುತ್ತಿರುವ ಬಡಗಬೆಟ್ಟು ಕ್ರೆಡಿಟ್ ಕೋ-ಆಪರೇಟಿವ್‌ ಸೊಸೈಟಿಯ 11ನೇ ಸಂಪೂರ್ಣ ಹವಾನಿಯಂತ್ರಿತ ನೂತನ ಶಾಖೆಯು ಜ.26 ರಂದು ಕಾರ್ಕಳದ ಅನಂತಶಯನ ರಸ್ತೆಯ ವಿಕಾಸ ಟವರ್‌ನಲ್ಲಿ ಉದ್ಘಾಟನೆಗೊಳ್ಳಲಿದೆ.

ನೂತನ ಶಾಖೆಯನ್ನು ಜ.26 ರಂದು ಸಂಜೆ 4 ಗಂಟೆಗೆ ಕಾರ್ಕಳ ಶಾಸಕ ವಿ. ಸುನಿಲ್ ಕುಮಾರ್ ಉದ್ಘಾಟಿಸಲಿದ್ದಾರೆ. ಮೂಡುಬಿದ್ರೆ ಜೈನ‌ ಮಠದ ಸ್ವಸ್ತಿ ಶ್ರೀ ಭಟ್ಟಾರಕ ಚಾರುಕೀರ್ತಿ ಪಂಡಿತಾಚಾರ್ಯವರ್ಯ ಮಹಾಸ್ವಾಮಿಗಳು ಆಶೀರ್ವಚನ ನೀಡಲಿದ್ದಾರೆ. ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷರಾದ ಡಾ. ಎಮ್.ಎನ್. ರಾಜೇಂದ್ರ ಕುಮಾರ್ ಅಧ್ಯಕ್ಷತೆ ವಹಿಸಲಿದ್ದಾರೆ, ಉಡುಪಿ ಶಾಸಕ ಯಶ್ ಪಾಲ್ ಎ. ಸುವರ್ಣ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ.

ಉದಯ ಕೃಷ್ಣಯ್ಯ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಮುನಿಯಾಲು ಉದಯ ಕುಮಾರ್ ಶೆಟ್ಟಿ, ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಉಡುಪಿ ಜಿಲ್ಲಾಧ್ಯಕ್ಷ ಬಿ.ಜಯಕರ ಶೆಟ್ಟಿ ಇಂದ್ರಾಳಿ, ಕಾರ್ಕಳ ವೆಂಕಟರಮಣ ದೇವಸ್ಥಾನ ಆಡಳಿತ ಮೊಕ್ತೇಸರ ಕೆ.ಜಯರಾಮ್ ಪ್ರಭು, ಕಾರ್ಕಳ ಪುರಸಭೆ ಮುಖ್ಯಾಧಿಕಾರಿ ರೂಪ ಟಿ. ಶೆಟ್ಟಿ, ಪುರಸಭಾ ಸದಸ್ಯ ಶುಭದ ರಾವ್, ಸಹಕಾರ ಸಂಘಗಳ ಉಪನಿಬಂಧಕ ರಮೇಶ್ ಹೆಚ್.ಎನ್, ಸಹಕಾರ ಸಂಘಗಳ ಸಹಾಯಕ ನಿಬಂಧಕ, ಕುಂದಾಪುರ ಉಪವಿಭಾಗದ ಅರುಣ್ ಕುಮಾರ್ ಎಸ್. ವಿ ಭಾಗವಹಿಸಲಿದ್ದಾರೆ ಎಂದು ಸೊಸೈಟಿಯ ಅಧ್ಯಕ್ಷ ಸಂಜೀವ ಕಾಂಚನ್ ಹಾಗೂ ಪ್ರಧಾನ ವ್ಯವಸ್ಥಾಪಕ ರಾಜೇಶ್ ವಿ. ಶೇರಿಗಾರ್ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

 
 
 
 
 
 
 
 
 
 
 

Leave a Reply