ಬಾಲಕಿ ಗರ್ಭವತಿ: ಅತ್ತೆ ಮಗನಿಂದ ಲೈಂಗಿಕ ದೌರ್ಜನ್ಯ

ಬೆಳ್ತಂಗಡಿ: ಅಪ್ರಾಪ್ತೆಯ ಮೇಲೆ ಅತ್ತೆ ಮಗ ಲೈಂಗಿಕ ದೌರ್ಜನ್ಯವೆಸಗಿದ ಕಾರಣ, ಆಕೆ ಗರ್ಭಾವತಿಯಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ಕಡಿರುದ್ಯಾವರ ಗ್ರಾಮದಲ್ಲಿ ನಡೆದಿದೆ.

ಪ್ರಕರಣಕ್ಕೆ ಸಂಬಂಧಪಟ್ಟಂತೆ ಕುವೆಟ್ಟು ಗ್ರಾಮದ ಸಬರಬೈಲು ನಿವಾಸಿ ಆರೋಪಿ ರಾಜೇಶ್ ಎಂಬಾತನನ್ನು ಪೋಕ್ಸೋ ಕಾಯ್ದೆಯಡಿಯಲ್ಲಿ ಬಂಧಿಸಲಾಗಿದೆ.
ಬಾಲಕಿ 2021 ಜುಲೈಯಲ್ಲಿ ತನ್ನ ತಂದೆಯ ಅಕ್ಕನ ಮನೆಯಾದ ಸಬರಬೈಲು ಎಂಬಲ್ಲಿಗೆ ಹೋಗಿದ್ದಳು. ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ರಾತ್ರಿ ವೇಳೆ ಬಾವನಾದ ರಾಜೇಶ್‌ ಆಕೆಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ, ಅಲ್ಲದೆ ಒಂದು ತಿಂಗಳ ಬಳಿಕ ಆರೋಪಿಯ ಮನೆಗೆ ಹೋಗಿದ್ದ ವೇಳೆಯೂ ಲೈಂಗಿಕ ದೌರ್ಜನ್ಯವೆಸಗಿದ್ದಾನೆ ಎಂದು ಸಂತ್ರಸ್ತೆ ದೂರಿನಲ್ಲಿ ತಿಳಿಸಿದ್ದಾಳೆ.
ಇತ್ತೀಚೆಗೆ ಬಾಲಕಿ ತನ್ನ ಮನೆಯಲ್ಲಿ ನಿತ್ರಾಣಗೊಂಡು ಮಲಗಿದ್ದಳು. ಆಕೆಯ ದೇಹದಲ್ಲಾದ ಬದಲಾವಣೆಯನ್ನು ಗಮನಿಸಿದ ಹೆತ್ತವರು, ವಿಚಾರಿಸಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಬಳಿಕ ಪೋಷಕರು ಬೆಳ್ತಂಗಡಿ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಆರೋಪಿಯ ಮೇಲೆ ಪೋಕ್ಸೋ ಕಾಯ್ದೆಯಡಿ ಕೇಸು ದಾಖಲಿಸಿದ ಬೆಳ್ತಂಗಡಿ ಪೊಲೀಸರು, ಆತನನ್ನು ವಶಕ್ಕೆ ಪಡೆದಿದ್ದಾರೆ.

 
 
 
 
 
 
 
 
 
 
 

Leave a Reply