ಮತಾಂತರ ನಿಷೇಧ ಕಾನೂನು ಜಾರಿಗೆ ಬರಬೇಕು~ ಶಾಸಕ ರಘುಪತಿ ಭಟ್

ಬೆಳಗಾವಿಯಲ್ಲಿ ಮತಾಂತರ ನಿಷೇಧ ಕಾಯ್ದೆ ಜಾರಿಯಾದರೆ ಇದೊಂದು ಐತಿಹಾಸಿಕ ಅಧಿವೇಶನ ವಾಗಲಿದೆ. ಬೆಳಗಾವಿಯಲ್ಲಿ ನಡೆಯಲಿರುವ ಅಧೀವೇಶನದಲ್ಲಿ ಮತಾಂತರ ನಿಷೇಧ ಕಾಯ್ದೆ ಜಾರಿಯಾದರೆ ಇದೊಂದು ಐತಿಹಾಸಿಕ ಅಧಿವೇಶನವಾಗಲಿದೆ ಎಂದು ಉಡುಪಿ ಶಾಸಕ ರಘುಪತಿ ಭಟ್‌ ಅಭಿಪ್ರಾಯಪಟ್ಟಿದ್ದಾರೆ.

ಅವರು ಭಾನುವಾರ ಉಡುಪಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿ ಸೋಮವಾರದಿಂದ ಬೆಳಗಾವಿಯಲ್ಲಿ ಅಧಿವೇಶನ ಪ್ರಾರಂಭವಾಗುತ್ತಿದ್ದು ಇಲ್ಲಿ ಮತಾಂತರ ನಿಷೇಧ ಕಾನೂನು ಜಾರಿಗೆ ಬರಬೇಕು ಎಂಬ ನಿರೀಕ್ಷೆಯಲ್ಲಿದ್ದೇವೆ. 

ಈಗಾಗಲೇ ಮಂಗಳೂರು -ಉಡುಪಿ ಭಾಗದಲ್ಲಿ ನಡೆಯುತ್ತಿರುವ ಮತಾಂತರ ಪ್ರಕರಣವನ್ನು ನೋಡಿದ್ದೇವೆ ಆದ್ದರಿಂದ ಶೀಘ್ರವಾಗಿ ಕಾಯ್ದೆ ಜಾರಿಯಾಗುವ ಅಗತ್ಯವಿದ್ದು, ಈ ಅಧಿವೇಶನದಲ್ಲಿ ಕಾಯ್ದೆ ಜಾರಿಯಾಗುತ್ತದೆ ಅನ್ನೋ ವಿಶ್ವಾಸವಿದೆ ಎಂದರು.

ಕಾಂಗ್ರೆಸ್‌ ಪಕ್ಷದವರು ಮತಾಂತರ ನಿಷೇಧ ಕಾಯ್ದೆಯನ್ನು ವಿರೋಧಿಸುತ್ತಿರುವುದರ ಕುರಿತು ಪ್ರತಿಕ್ರಿಯಿಸಿದ ಅವರು ಕಾಂಗ್ರೆಸ್ನವರು ವೋಟ್ ಬ್ಯಾಂಕಿಗಾಗೋಸ್ಕರ ವಿರೋಧ ಮಾಡುತ್ತಿದ್ದು, ಈ ಹಿಂದಿನಿಂದಲೂ ಕಾಂಗ್ರೆಸ್ನವರು ಇದನ್ನೇ ಮಾಡಿಕೊಂಡು ಬಂದಿದ್ದಾರೆ.

ಮತಾಂತರ ನಿಷೇಧ ಒಂದು ರಾಷ್ಟ್ರೀಯ ವಿಚಾರವಾಗಿದ್ದು, ರಾಷ್ಟ್ರೀಯ ವಿಚಾರ ಎನ್ನುವ ಕಾರಣಕ್ಕೆ ಕಾಂಗ್ರೆಸ್ ವಿರೋಧ ಮಾಡುತ್ತಿದ್ದಾರೆ. ಈ ಹಿಂದೆ ಗೋಹತ್ಯೆ ಕಾಯ್ದೆಗೂ ಕಾಂಗ್ರೆಸ್ ವಿರೋಧ ಮಾಡಿದೆ ಆದರೆ ವಿಧಾನಸಭೆಯಲ್ಲಿ ನಮಗೆ ಬಹುಮತ ಇದೆ ನಾವು ಕಾನೂನು ಮಾಡುತ್ತೇವೆ ಎಂದರು.

 
 
 
 
 
 
 
 
 
 
 

Leave a Reply