ಸಂಘಟನಾ ಶಕ್ತಿ ಮತ್ತು ಜನ ವಿಶ್ವಾಸದ ಮೂಲಕ ರಾಜ್ಯದಲ್ಲಿ ಮಗದೊಮ್ಮೆ ಬಿಜೆಪಿ ನೇತೃತ್ವದ ಆಡಳಿತ ನಿಶ್ಚಿತ: ಜಿಲ್ಲಾ ಉಸ್ತುವಾರಿ ಸಚಿವ ಎಸ್.ಅಂಗಾರ

ಭಾರತೀಯ ಜನತಾ ಪಾರ್ಟಿಗೆ ಜನತೆ ದೇಶ ಮತ್ತು ರಾಜ್ಯದಲ್ಲಿ ಉತ್ತಮ ಆಡಳಿತದ ಅವಕಾಶವನ್ನು ಕಲ್ಪಿಸಿಕೊಟ್ಟಿದ್ದಾರೆ. ಜನತೆಯ ನಿರೀಕ್ಷೆ ಈಡೇರಿಸುವಂತಹ ಪಕ್ಷ ಬಿಜೆಪಿ ಎಂಬ ವಿಶ್ವಾಸ ಜನತೆಯಲ್ಲಿದೆ. ಬಿಜೆಪಿ ಸರಕಾರದ ಆಡಳಿತಕ್ಕೆ ಬಂದಾಗ ಎಲ್ಲೆಡೆ ಅಭಿವೃದ್ಧಿಯ ಪರ್ವಕಾಲವನ್ನು ಜನತೆ ಕಂಡಿದ್ದಾರೆ. ಈ ನೆಲೆಯಲ್ಲಿ ಪಕ್ಷದ ಸಂಘಟನಾ ಶಕ್ತಿ ಮತ್ತು ಜನ ವಿಶ್ವಾಸದ ಮೂಲಕ ಮಗದೊಮ್ಮೆ ಕರ್ನಾಟಕದಲ್ಲಿ ಬಿಜೆಪಿ ನೇತೃತ್ವದ ಸರಕಾರ ಆಡಳಿತದ ಚುಕ್ಕಾಣಿಯನ್ನು ಹಿಡಿಯಲಿದೆ ಎಂದು ಕರ್ನಾಟಕ ಸರಕಾರದ ಮೀನುಗಾರಿಕೆ, ಬಂದರು, ಒಳನಾಡ ಜಲಸಾರಿಗೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಅಂಗಾರ ಹೇಳಿದರು.

ಅವರು ನ.5ರಂದು ಮಣಿಪಾಲದ ಹೋಟೆಲ್ ಕಂಟ್ರಿ ಇನ್ ಸಭಾಂಗಣದಲ್ಲಿ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಅಧ್ಯಕ್ಷತೆಯಲ್ಲಿ ನಡೆದ ಬಿಜೆಪಿ ಜಿಲ್ಲಾ ವಿಶೇಷ ಕಾರ್ಯಕಾರಿಣಿ ಸಭೆಯನ್ನು ಜ್ಯೋತಿ ಬೆಳಗಿಸಿ ಉದ್ಘಾಟಿಸಿ ಮಾತನಾಡಿದರು.

ಬಿಜೆಪಿ ನೇತೃತ್ವದ ಸರಕಾರದ ಅಭಿವೃದ್ಧಿ ಪರ ಉತ್ತಮ ಆಡಳಿತ ಮುಂದುವರಿದರೆ ತಮಗೆ ಭವಿಷ್ಯವಿಲ್ಲ ಎಂಬುದನ್ನು ಅರಿತ ವಿರೋಧ ಪಕ್ಷಗಳು ಹತಾಶೆಯಿಂದ ವಿವಿಧ ರೀತಿಯ ಟೀಕೆಗಳನ್ನು ಮಾಡುತ್ತಿವೆ. ಇಂತಹ ಸಂದರ್ಭದಲ್ಲಿ ಪಕ್ಷದ ಕಾರ್ಯಕರ್ತರು ಬಹಳ ಎಚ್ಚರಿಕೆಯಿಂದ ಪಕ್ಷದ ಸಂಘಟನಾತ್ಮಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ಸರಕಾರದ ಜನಪರ ಯೋಜನೆಗಳನ್ನು ಜನತೆಗೆ ತಲುಪಿಸುವ ಮೂಲಕ ಮುಂದಿನ ಚುನಾವಣೆಗಳನ್ನು ಯಶಸ್ವಿಯಾಗಿ ಗೆಲ್ಲುವ ಹೊಣೆಗಾರಿಕೆಯೊಂದಿಗೆ ಕಾರ್ಯಪ್ರವೃತ್ತರಾಗಬೇಕಿದೆ ಎಂದರು.

ಜಿಲ್ಲಾ ಮಟ್ಟದಲ್ಲಿ ಪಕ್ಷವನ್ನು ಬಲಿಷ್ಠವಾಗಿ ಕಟ್ಟುವುದರ ಮೂಲಕ ಯಾವುದೇ ಸಂದರ್ಭದಲ್ಲಿ ಚುನಾವಣೆಯನ್ನು ಎದುರಿಸಿ ವಿಜಯದತ್ತ ಹೆಜ್ಜೆ ಹಾಕುವ ಸಂಘಟನಾ ಶಕ್ತಿ ಇರುವ ಪಕ್ಷ ಬಿಜೆಪಿ. ಈ ನಿಟ್ಟಿನಲ್ಲಿ ಕೇಂದ್ರ ಮತ್ತು ರಾಜ್ಯ ಸರಕಾರದ ಜನಪರ ಯೋಜನೆಗಳ ಪ್ರಚಾರದಿಂದ ಪ್ರಧಾನಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸರಕಾರ ಉದಾತ್ತ ಯೋಜನೆಗಳನ್ನು ನೀಡಿದೆ ಎಂಬ ಭಾವನೆ ಜನತೆಯಲ್ಲಿ ಮೂಡಲು ಸಾಧ್ಯ. ಇಂತಹ ಜನ ವಿಶ್ವಾಸವನ್ನು ಪಡೆದುಕೊಂಡಾಗ ಬಿಜೆಪಿ ಗೆಲುವು ಶತಸಿದ್ಧ. ವಿರೋಧಿಗಳ ಅಪಪ್ರಚಾರದ ಹೊರತಾಗಿಯೂ ಬಿಜೆಪಿ 150ಕ್ಕೂ ಹೆಚ್ಚಿನ ಸ್ಥಾನಗಳನ್ನು ಗೆಲ್ಲುವ ಮೂಲಕ ನಿಶ್ಚಳ ಬಹುಮತದೊಂದಿಗೆ ಉತ್ತಮ ಆಡಳಿತವನ್ನು ನೀಡಲಿದೆ ಎಂದು ಅಂಗಾರ ಹೇಳಿದರು.

ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಪ್ರಸ್ತಾವಿಕವಾಗಿ ಮಾತನಾಡಿ, ರಾಜ್ಯ ಬಿಜೆಪಿ ನೀಡಿರುವ ಪಕ್ಷದ ಎಲ್ಲಾ ಸಂಘಟನಾತ್ಮಕ ಕಾರ್ಯಕ್ರಮಗಳನ್ನು ಉಡುಪಿ ಜಿಲ್ಲೆಯಲ್ಲಿ ಅಚ್ಚುಕಟ್ಟಾಗಿ ನಿರ್ವಹಿಸಲಾಗಿದೆ. ‘ಬೂತ್ ಸಶಸ್ತೀಕರಣ’ ಹಾಗೂ ‘ಸೇವಾ ಪಾಕ್ಷಿಕ’ ಅಭಿಯಾನ ಜಿಲ್ಲೆಯಲ್ಲಿ ಪರಿಣಾಮಕಾರಿ ಯಶಸ್ಸನ್ನು ಕಂಡಿದೆ. ದೇಶದಲ್ಲೇ ವಿನೂತನ ಕಾರ್ಯಕ್ರಮವಾಗಿ ಉಡುಪಿ ಜಿಲ್ಲೆಯಾದ್ಯಂತ ಎಲ್ಲ ಮಂಡಲಗಳ ವ್ಯಾಪ್ತಿಯಲ್ಲಿ ಶಕ್ತಿ ಕೇಂದ್ರಗಳ ಸಭೆಯನ್ನು ಆಯೋಜಿಸಲಾಗುತ್ತಿದೆ. ಜಿಲ್ಲಾ ಪದಾಧಿಕಾರಿಗಳು ಜಿಲ್ಲಾ ವ್ಯಾಪ್ತಿಯ ಎಲ್ಲಾ 1,111 ಬೂತ್ ಗಳಲ್ಲಿ ಬೂತ್ ಅಧ್ಯಕ್ಷರ ಅಧ್ಯಕ್ಷತೆಯಲ್ಲಿ ಕಾರ್ಯಕರ್ತರ ಸಭೆ ಹಾಗೂ ಫಲಾನುಭವಿಗಳ ಸಭೆಗಳನ್ನು ನಡೆಸಲಿದ್ದಾರೆ. ಕೇಂದ್ರ ಮತ್ತು ರಾಜ್ಯ ಸರಕಾರ ಹಲವಾರು ಜನಪರ ಯೋಜನೆಗಳನ್ನು ನೀಡಿದೆ. ಈ ನಿಟ್ಟಿನಲ್ಲಿ ಪಕ್ಷದ ಎಲ್ಲ ಸ್ತರದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಪಕ್ಷದ ಕೆಲಸ ಕಾರ್ಯಗಳಿಗೆ ವೇಗ ನೀಡುವ ಮೂಲಕ ಮುಂದಿನ ಚುನಾವಣೆಯಲ್ಲಿ ಜಿಲ್ಲೆಯ ಐದೂ ವಿಧಾನಸಭಾ ಕ್ಷೇತ್ರಗಳಲ್ಲಿ ದೊಡ್ಡ ಅಂತರದ ಗೆಲುವು ಸಾಧಿಸಲು ಕೈಜೋಡಿಸಬೇಕು ಎಂದರು.

ಈ ಸಂದರ್ಭದಲ್ಲಿ ಕರ್ನಾಟಕ ಸರಕಾರದ ಇಂಧನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ.ಸುನಿಲ್ ಕುಮಾರ್, ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಹಾಗೂ ಮೈಸೂರ್ ಎಲೆಕ್ಟ್ರಿಕಲ್ ಇಂಡಸ್ಟ್ರೀಸ್ ಲಿಮಿಟೆಡ್ ಅಧ್ಯಕ್ಷ ಕೆ.ಉದಯಕುಮಾರ್ ಶೆಟ್ಟಿ, ಮಂಗಳೂರು ವಿಭಾಗ ಸಂಘಟನಾ ಪ್ರಧಾನ ಕಾರ್ಯದರ್ಶಿ ಪ್ರಸಾದ್ ಕುಮಾರ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರ್ ರತ್ನಾಕರ ಹೆಗ್ಡೆ, ಉಡುಪಿ ಶಾಸಕ ಕೆ.ರಘುಪತಿ ಭಟ್, ಕಾಪು ಶಾಸಕ ಲಾಲಾಜಿ ಆರ್. ಮೆಂಡನ್, ಕುಂದಾಪುರ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ, ಬೈಂದೂರು ಶಾಸಕ ಬಿ.ಎಮ್. ಸುಕುಮಾರ್ ಶೆಟ್ಟಿ, ರಾಜ್ಯ ಬಿಜೆಪಿ ಉಪಾಧ್ಯಕ್ಷೆ ನಯನಾ ಗಣೇಶ್, ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಶ್ಪಾಲ್ ಎ. ಸುವರ್ಣ, ಕರ್ನಾಟಕ ಆಹಾರ ನಿಗಮದ ಉಪಾಧ್ಯಕ್ಷ ಕಿರಣ್ ಕುಮಾರ್ ಕೊಡ್ಗಿ, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮನೋಹರ್ ಎಸ್. ಕಲ್ಮಾಡಿ, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕುತ್ಯಾರು ನವೀನ್ ಶೆಟ್ಟಿ ಹಾಗೂ ಪಕ್ಷದ ಪ್ರಮುಖರು, ಬಿಜೆಪಿ ಜಿಲ್ಲಾ ಪದಾಧಿಕಾರಿಗಳು, ಜಿಲ್ಲಾ ಕಾರ್ಯಕಾರಿಣಿ ಸದಸ್ಯರು, ಜಿಲ್ಲಾ ಮೋರ್ಚಾ ಹಾಗೂ ಮಂಡಲಗಳ ಅಧ್ಯಕ್ಷರು ಮತ್ತು ಪ್ರಧಾನ ಕಾರ್ಯದರ್ಶಿಗಳು, ಜಿಲ್ಲಾ ಪ್ರಕೋಷ್ಠಗಳ ಸಂಯೋಜಕರು ಮತ್ತು ಸಂಚಾಲಕರು ಹಾಗೂ ಜಿಲ್ಲಾ ವಿಶೇಷ ಕಾರ್ಯಕಾರಿಣಿ ಸಭೆಯ ಇನ್ನಿತರ ಅಪೇಕ್ಷಿತರು ಉಪಸ್ಥಿತರಿದ್ದರು.

ಪಕ್ಷದ ಅಗಲಿದ ಚೇತನಗಳಿಗೆ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸದಾನಂದ ಉಪ್ಪಿನಕುದ್ರು ಸಂತಾಪ ಸೂಚಿಸಿದರು.

ಕೇಂದ್ರ ಮತ್ತು ರಾಜ್ಯ ಸರಕಾರಗಳಿಗೆ ಅಭಿನಂದನೆ ಸಲ್ಲಿಸುವ ನಿರ್ಣಯವನ್ನು ಜಿಲ್ಲಾ ಸಹ ವಕ್ತಾರ ಶಿವಕುಮಾರ್ ಅಂಬಲಪಾಡಿ ಸಭೆಯಲ್ಲಿ ಮಂಡಿಸಿದರು. ಜಿಲ್ಲಾ ಮಾಧ್ಯಮ ಸಂಚಾಲಕ ಶ್ರೀನಿಧಿ ಹೆಗ್ಡೆ ನಿರ್ಣಯವನ್ನು ಅನುಮೋದಿಸಿದರು. ಓಂಕಾರದ ಮೂಲಕ ಸಭೆಯು ಸರ್ವಾನುಮತದಿಂದ ನಿರ್ಣಯವನ್ನು ಅಂಗೀಕರಿಸಿತು.

ಜಿಲ್ಲಾ ಉಪಾಧ್ಯಕ್ಷರುಗಳಾದ ಪೆರ್ಣಂಕಿಲ ಶ್ರೀಶ ನಾಯಕ್ ಸ್ವಾಗತಿಸಿ, ಗೀತಾಂಜಲಿ ಎಮ್. ಸುವರ್ಣ ವಂದಿಸಿ, ಕಿಶೋರ್ ಕುಮಾರ್ ಕುಂದಾಪುರ ಕಾರ್ಯಕ್ರಮ ನಿರೂಪಿಸಿದರು.

 
 
 
 
 
 
 
 
 
 
 

Leave a Reply