ಜ.9: ನಗರಸಭೆಯಲ್ಲಿ ಮಿತಿಮೀರಿದ ಭ್ರಷ್ಟಾಚಾರ ವಿರುದ್ಧ ಪ್ರತಿಭಟನೆ

ಉಡುಪಿ: ನಗರಸಭೆಯಲ್ಲಿ ಆಡಳಿತಾಧಿಕಾರಿ ಅವಧಿಯಲ್ಲಿ ನಡೆಯುತ್ತಿರುವ ವ್ಯಾಪಕ ಭ್ರಷ್ಟಾಚಾರ, ಕುಡಿಯುವ ನೀರಿನ ವಿಪರೀತ ಬೆಲೆ ಏರಿಕೆ, ಕಳಪೆ ಕಾಮಗಾರಿ, ಅಕ್ರಮ ಕಟ್ಟಡಗಳ ನಿರ್ಮಾಣಕ್ಕೆ ಅನುಮತಿ ಹಾಗೂ ಕಚೇರಿಯಲ್ಲಿ ಮಿತಿ ಮೀರಿದ ದಲ್ಲಾಳಿಗಳ ಹಾವಳಿ ವಿರೋಧಿಸಿ ಜ.9ರಂದು ನಗರ ಬಿಜೆಪಿ ವತಿಯಿಂದ ನಗರಸಭಾ ಕಚೇರಿಗೆ ಮುತ್ತಿಗೆ ಹಾಕುವುದಾಗಿ ನಗರ ಬಿಜೆಪಿ ಅಧ್ಯಕ್ಷ ಮಹೇಶ ಠಾಕೂರ್ ತಿಳಿಸಿದ್ದಾರೆ.
ನಗರಸಭೆ ಅಧಿಕಾರಿಗಳು ಕಾಂಗ್ರೆಸ್ ಪಕ್ಷದ ಏಜೆಂಟ್ ರೀತಿಯಲ್ಲಿ ವರ್ತಿಸುತ್ತಿದ್ದು, ನಗರಸಭೆ ಕಚೇರಿಯನ್ನು ಕಾಂಗ್ರೆಸ್ ಪಕ್ಷದ ಕಚೇರಿಯನ್ನಾಗಿ ಮಾಡಿಕೊಂಡಿದ್ದಾರೆ.
ಜಿಲ್ಲಾ ಉಸ್ತುವಾರಿ ಸಚಿವರು ಜಿಲ್ಲೆಗೆ ಭೇಟಿ ನೀಡದೇ ನಿರ್ಲಕ್ಷ್ಯ ವಹಿಸುತ್ತಿದ್ದು, ಅಧಿಕಾರಿಗಳು ರಾಜಾರೋಷವಾಗಿ ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ. ಸಾರ್ವಜನಿಕರು ತಮ್ಮ ದಿನನಿತ್ಯದ ಕೆಲಸಗಳಿಗೆ ಕಚೇರಿಗೆ ಅಲೆದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.
ಪ್ರತಿಭಟನೆಯಲ್ಲಿ ಶಾಸಕ ಯಶಪಾಲ್ ಸುವರ್ಣ, ನಗರ ಬಿಜೆಪಿ ಅಧ್ಯಕ್ಷ ಮಹೇಶ್ ಠಾಕೂರ್, ನಗರಸಭಾ ಸದಸ್ಯರು, ಪಕ್ಷದ ಮುಖಂಡರು, ಸಾರ್ವಜನಿಕರು, ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದು ಠಾಕೂರ್ ತಿಳಿಸಿದ್ದಾರೆ.
 
 
 
 
 
 
 
 
 
 
 

Leave a Reply