ಮಾಜಿ ಸಿಎಂ ಸಿದ್ದರಾಮಯ್ಯ ದೇಶದ್ರೋಹಕ್ಕೆ ಸಹಾಯ ~ಉಡುಪಿ ಜಿಲ್ಲಾ ಬಿಜೆಪಿ

ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ದೇಶದ್ರೋಹಕ್ಕೆ ಸಹಾಯ ಮಾಡಿದ ಬಗ್ಗೆ ಪ್ರಕರಣ ದಾಖಲಿಸುವಂತೆ ಉಡುಪಿ ಜಿಲ್ಲಾ ಬಿಜೆಪಿಯಿಂದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ದೂರು:

ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ರಾಧಾಕೃಷ್ಣ ನಾಯಕ್ ಹಿರ್ಗಾನ ಎಂಬವರು ಸಾರ್ವಜನಿಕವಾಗಿ ಸಾಮಾಜಿಕ ಜಾಲತಾಣದಲ್ಲಿ ಭಾರತೀಯ ಯೋಧರ ಬಗ್ಗೆ ಅವಹೇಳನಕಾರಿ ಮತ್ತು ಶತ್ರು ರಾಷ್ಟ್ರ ಪಾಕಿಸ್ತಾನಕ್ಕೆ ಬೆಂಬಲಿಸಿ ಭಾರತ ದೇಶಕ್ಕೆ ಕೆಡುಕು ಉಂಟುಮಾಡುವ ಸಂದೇಶವನ್ನು ಬಿತ್ತರಿಸಿರುವಂತೆ ಈ ಬಗ್ಗೆ ಅವರ ವಿರುದ್ಧ ಪ್ರಕರಣ ದಾಖಲಾಗಿ ತನಿಖೆಯಲ್ಲಿದೆ.

ಈ ಮಧ್ಯೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತನ್ನ ಟ್ವೀಟರ್ ಖಾತೆಯಲ್ಲಿ ದೇಶದ್ರೋಹಿ ರಾಧಾಕೃಷ್ಣ ನಾಯಕ್ ನಿಗೆ ಬೆಂಬಲ ಸೂಚಿಸಿ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದು, ಈ ಬಗ್ಗೆ ಓರ್ವ ದೇಶದ್ರೋಹಿಯ ದೇಶದ್ರೋಹ ಮತ್ತು ಭಾರತೀಯ ಯೋಧರ ಬಗ್ಗೆ ಕೊಲೆ ಮಾಡುವ ಪಿತೂರಿ ಹೊಂದಿರುವ ವ್ಯಕ್ತಿಗೆ ಸಹಕರಿಸಿರುವುದು ಮೇಲ್ನೋಟಕ್ಕೆ ಸಾಬೀತು ಕಂಡುಬಂದಿರುತ್ತದೆ.

ಈ ಬಗ್ಗೆ ರಾಜ್ಯದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮೇಲೆ ದೇಶದ್ರೋಹಕ್ಕೆ ಸಹಾಯ ಮಾಡಿದ ಮತ್ತು ದೇಶದ್ರೋಹಕ್ಕೆ ಪ್ರಚೋದನೆ ನೀಡಿ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಪಸರಿಸುತ್ತಿರುವ ಐಪಿಸಿ ಸೆಕ್ಷನ್ 124ಎ ರಂತೆ ಸೂಕ್ತ ಕಾನೂನು ಕ್ರಮ ಜರುಗಿಸಬೇಕೆಂದು ಉಡುಪಿ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿಗಳಿಗೆ ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ನೇತೃತ್ವದಲ್ಲಿ ದೂರು ನೀಡಲಾಯಿತು.

ಈ ಸಂದರ್ಭದಲ್ಲಿ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಶ್ಪಾಲ್ ಎ. ಸುವರ್ಣ, ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯೆ ಗೀತಾಂಜಲಿ ಸುವರ್ಣ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಪೆರ್ಣಂಕಿಲ ಶ್ರೀಶ ನಾಯಕ್, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಕುತ್ಯಾರು ನವೀನ್ ಶೆಟ್ಟಿ, ಮನೋಹರ ಎಸ್. ಕಲ್ಮಾಡಿ, ಜಿಲ್ಲಾ ಕೋಶಾಧಿಕಾರಿ ಪ್ರವೀಣ್ ಕುಮಾರ್ ಶೆಟ್ಟಿ ಕಪ್ಪೆಟ್ಟು, ಜಿಲ್ಲಾ ವಕ್ತಾರ ಗುರುಪ್ರಸಾದ್ ಶೆಟ್ಟಿ ಕಟಪಾಡಿ,

ಜಿಲ್ಲಾ ಕಾರ್ಯದರ್ಶಿ ರೇಶ್ಮಾ ಉದಯ ಶೆಟ್ಟಿ. 
ಜಿಲ್ಲಾ ಸಹ ವಕ್ತಾರರಾದ ಗಿರೀಶ್ ಎಮ್. ಅಂಚನ್, ಶಿವಕುಮಾರ್ ಅಂಬಲಪಾಡಿ, ಜಿಲ್ಲಾ ಮಾಧ್ಯಮ ಸಂಚಾಲಕ ಶ್ರೀನಿಧಿ ಹೆಗ್ಡೆ ಅತ್ರಾಡಿ, ಜಿಲ್ಲಾ  ಯುವ ಮೋರ್ಚಾ ಅಧ್ಯಕ್ಷ ವಿಖ್ಯಾತ್ ಶೆಟ್ಟಿ, ಜಿಲ್ಲಾ ಹಿಂದುಳಿದ ವರ್ಗಗಳ ಮೋರ್ಚಾ ಅಧ್ಯಕ್ಷ ಸುರೇಂದ್ರ ಪಣಿಯೂರು, ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ವೀಣಾ ಎಸ್. ಶೆಟ್ಟಿ, ಉಪಾಧ್ಯಕ್ಷೆ ವಿದ್ಯಾ ಪೈ, ಪ್ರಧಾನ ಕಾರ್ಯದರ್ಶಿ ಪ್ರಮೀಳಾ ಹರೀಶ್, ಉಡುಪಿ ನಗರಸಭಾ ಸದಸ್ಯ ಬಾಲಕೃಷ್ಣ ಶೆಟ್ಟಿ ನಿಟ್ಟೂರು, ಬಿಜೆಪಿ ಕಾಪು ಮಂಡಲ ಅಧ್ಯಕ್ಷ ಶ್ರೀಕಾಂತ ನಾಯಕ್ ಅಲೆವೂರು ಮುಂತಾದವರು ಉಪಸ್ಥಿತರಿದ್ದರು.
 
 
 
 
 
 
 
 
 
 
 

Leave a Reply