Janardhan Kodavoor/ Team KaravaliXpress
25.6 C
Udupi
Sunday, July 3, 2022
Sathyanatha Stores Brahmavara

ಉಡುಪಿ ನಗರ ಬಿಜೆಪಿ ಆಶ್ರಯದಲ್ಲಿ ಮಣಿಪಾಲದಲ್ಲಿ ಜನಪ್ರತಿನಿಧಿ ಸಮಾವೇಶ

ದಿನಾಂಕ 11.06.2022 ರಂದು ಶನಿವಾರ ಬೆಳಿಗ್ಗೆ 9 ಗಂಟೆಯಿಂದ ಮದ್ಯಾಹ್ನ 1 ಗಂಟೆಯವರೆಗೆ ಭಾರತೀಯ ಜನತಾ ಪಾರ್ಟಿ ಉಡುಪಿ ನಗರ ಇದರ ಆಶ್ರಯದಲ್ಲಿ ಶಾಸಕರಾದ ಕೆ ರಘುಪತಿ ಭಟ್ ರವರ ನೇತೃತ್ವದಲ್ಲಿ ಹಾಗು ಅಧ್ಯಕ್ಷ ಮಹೇಶ್ ಠಾಕೂರ್ರವರ ಅಧ್ಯಕ್ಷತೆಯಲ್ಲಿ ಪ್ರಧಾನಿ ಶ್ರೀ ನರೇಂದ್ರ ಮೋದಿಯವರ ಎಂಟನೇ ವರ್ಷದ ಆಡಳಿತದ ಸಂಭ್ರಮಾಚರಣೆಯ ಸಂದರ್ಭದಲ್ಲಿ ಪಕ್ಷ ಹಮ್ಮಿಕೊಂಡ ಸುಶಾಸನ ಕಾರ್ಯಕ್ರಮದ ಅಂಗವಾಗಿ ಉಡುಪಿ ನಗರ ವ್ಯಾಪ್ತಿಯ ಜನಪ್ರತಿನಿಧಿ ಸಮಾವೇಶ ವನ್ನು ಮಣಿಪಾಲದ ಸರಳೆಬೆಟ್ಟು ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಹಮ್ಮಿ ಕೊಳ್ಳಲಾಗಿದೆ.

ಈ ಸಮಾವೇಶದಲ್ಲಿ ಉಡುಪಿಯ ಸಂಸದರು, ಶಾಸಕರು ಸ್ಥಳೀಯ ಸಂಸ್ಥೆಯ ಜನಪ್ರತಿನಿಧಿಗಳು ಹಾಗು ಸರಕಾರದಿಂದ ನಾಮನಿರ್ದೇಶಿತ ಸದಸ್ಯರು ಶಿಬಿರಾರ್ಥಿಗಳಾಗಿ ಭಾಗವಹಿಸಲಿದ್ದು ಸಂಪನ್ಮೂಲ ವ್ಯಕ್ತಿಗಳಿಂದ ಪ್ರಧಾನಿ ಶ್ರೀ ನರೇಂದ್ರ ಮೋದಿಯವರ ಎಂಟು ವರ್ಷಗಳ ಆಡಳಿತದ ಸುಶಾಸನ ಹಾಗು ಜನಪ್ರತಿನಿದಿಗಳು ಮತ್ತು ಕಾರ್ಯಕರ್ತರ ನಡುವಿನ ಭಾಂದವ್ಯ ಈ ವಿಷಯಗಳ ಬಗ್ಗೆ ವಿಶೇಷ ಉಪನ್ಯಾಸಗಳನ್ನು ಆಯೋಜಿಸಲಾಗಿದೆ ಎಂದು ಉಡುಪಿ ನಗರ ಬಿಜೆಪಿ ಪ್ರಕಟಣೆ ತಿಳಿಸಿದೆ.

- Advertisement -

ಸಂಬಂಧಿತ ಸುದ್ದಿ

Leave a Reply

ಛಾಯಾಂಕಣ

ಇತ್ತೀಚಿನ ಸುದ್ದಿ

error: Content is protected !!