ಭಾರತೀಯ ಜನತಾ ಪಾರ್ಟಿ, ಉಡುಪಿ ಗ್ರಾಮಾಂತರ “ಬೃಹತ್ ಫಲಾನುಭವಿಗಳ ಸಮಾವೇಶ

ಭಾರತೀಯ ಜನತಾ ಪಾರ್ಟಿ, ಉಡುಪಿ ಗ್ರಾಮಾಂತರ ಇದರ ವತಿಯಿಂದ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ 8 ವರ್ಷದ ಕೇಂದ್ರ ಸರಕಾರದ ಆಡಳಿತದ ಸಂಭ್ರಮಾಚರಣೆ ಸಂದರ್ಭದಲ್ಲಿ ಸೇವೆ, ಸುಶಾಸನ ಮತ್ತು ಬಡವರ ಕಲ್ಯಾಣ ಕಾರ್ಯಕ್ರಮದಡಿ “ಬೃಹತ್ ಫಲಾನುಭವಿಗಳ ಸಮಾವೇಶ” ಇಂದು ದಿನಾಂಕ 12-06-2022 ರಂದು ಚಾಂತಾರು ಮಹಿಷಮರ್ದಿನಿ ಅಮ್ಮನವರ ದೇವಸ್ಥಾನದ ಗದ್ದುಗೆ ಸಭಾಭವನದಲ್ಲಿ ನಡೆಯಿತು.

ಸಮಾಜ ಕಲ್ಯಾಣ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ ಅವರು
ಕಾರ್ಯಕ್ರಮಕ್ಕೆ ಆಗಮಿಸಿ ಶುಭ ಹಾರೈಸಿ, ಫಲಾನುಭವಿಗಳಿಗೆ ಕೇಂದ್ರ ಸರಕಾರದ ಯೋಜನೆಯ ಉಪಯೋಗವನ್ನು ತಿಳಿಸಿದರು.

ಶಾಸಕರಾದ ಕೆ. ರಘುಪತಿ ಭಟ್ ರವರು ಭಾಗವಹಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿ ಫಲಾನುಭವಿಗಳಿಗೆ ಆಯುಷ್ಮಾನ್ ಕಾರ್ಡ್ ವಿತರಣೆ ಮಾಡಿ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.

ಈ ಸಂದರ್ಭದಲ್ಲಿ ಗ್ರಾಮಾಂತರ ಬಿಜೆಪಿ ಅಧ್ಯಕ್ಷರಾದ ವೀಣಾ ನಾಯ್ಕ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಉಡುಪಿ ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಮಟ್ಟಾರು ರತ್ನಾಕರ ಹೆಗ್ಡೆ, ಉಡುಪಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ಶ್ರೀಶ ನಾಯಕ್, ಜಿಲ್ಲಾ ಬಿಜೆಪಿ ಸಹ ವಕ್ತಾರರಾದ ಪ್ರತಾಪ್ ಶೆಟ್ಟಿ, ಜಿಲ್ಲಾ ಎಸ್.ಟಿ ಮೋರ್ಚಾದ ಅಧ್ಯಕ್ಷರಾದ ನಿತ್ಯಾನಂದ, ರಾಜ್ಯ ಎಸ್.ಟಿ ಮೋರ್ಚಾದ ಕಾರ್ಯದರ್ಶಿಗಳಾದ ಉಮೇಶ್ ನಾಯ್ಕ್, ಚಾಂತಾರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಮೀರಾ ಸದಾನಂದ ಪೂಜಾರಿ, ಗ್ರಾಮಾಂತರ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಗಣೇಶ್ ಕುಲಾಲ್, ಸಚಿನ್ ಪೂಜಾರಿ, ಕಾರ್ಯಕ್ರಮದ ಸಂಚಾಲಕರಾದ ರಮ್ಯ ಉಪ್ಪೂರು, ಸಹ ಸಂಚಾಲಕರಾದ ಮಹೇಶ್ ಪೂಜಾರಿ ಮತ್ತು ಪಕ್ಷದ ಹಿರಿಯರು, ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.

 
 
 
 
 
 
 
 
 

Leave a Reply