Janardhan Kodavoor/ Team KaravaliXpress
24.6 C
Udupi
Thursday, July 7, 2022
Sathyanatha Stores Brahmavara

ನಗರ ಬಿಜೆಪಿ ವತಿಯಿಂದ ದಿವ್ಯಾಂಗ ಸಂಗಮ ಕಾರ್ಯಕ್ರಮ –

ಭಾರತೀಯ ಜನತಾ ಪಾರ್ಟಿ, ಉಡುಪಿ ನಗರ ಇವರ ಆಶ್ರಯದಲ್ಲಿ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಮತ್ತು ಪ್ರಧಾನಿ ನರೇಂದ್ರ ಮೋದಿ ಯವರ ನೇತೃತ್ವದ ಕೇಂದ್ರ ಸರಕಾರದ 8 ವರ್ಷಗಳ ಆಡಳಿತದ ಸಂಭ್ರಮಾಚರಣೆ ಸಂದರ್ಭದಲ್ಲಿ ಸೇವೆ, ಸುಶಾಸನ ಮತ್ತು ಬಡವರ ಕಲ್ಯಾಣ ಕಾರ್ಯಕ್ರಮದಡಿ “ದಿವ್ಯಾಂಗ ಸಂಗಮ” ಕಾರ್ಯಕ್ರಮ ಇಂದು ದಿನಾಂಕ 20-06-2022 ರಂದು ಮಲ್ಪೆ ವೀರಮಾರುತಿ ವ್ಯಾಯಾಮ ಶಾಲೆಯಲ್ಲಿ ನಡೆಯಿತು.

ಶಾಸಕರಾದ ಶ್ರೀ ಕೆ. ರಘುಪತಿ ಭಟ್ ರವರು ಭಾಗವಹಿಸಿ ಕೇಂದ್ರ ಕೃಷಿ ಹಾಗೂ ರೈತ ಕಲ್ಯಾಣ ರಾಜ್ಯ ಸಚಿವರಾದ ಶೋಭಾ ಕರಂದ್ಲಾಜೆ ಅವರೊಂದಿಗೆ ಕಾರ್ಯಕ್ರಮವನ್ನು ಉದ್ಘಾಟಿಸಿ ಫಲಾನುಭವಿಗಳಿಗೆ ವೀಲ್‌ಚೇರ್ ಹಾಗೂ ಸಹಾಯ ಧನ ವಿತರಣೆ ಜೊತೆಗೆ ಬೆನ್ನು ಮೂಳೆ ಮುರಿತಕ್ಕೊಳಗಾದವರು 30 ಜನರಿಗೆ ವೈದ್ಯಕೀಯ ಪರಿಕರಣಗಳನ್ನು ವಿತರಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಶ್ರೀ ಕೆ ರಘುಪತಿ ಭಟ್ ಅವರು ಪ್ರಸ್ತುತ ಶೇಕಡಾ 75% ಅಂಗವಿಕಲತೆಯನ್ನು ಹೊಂದಿರುವವರಿಗೆ ಮಾತ್ರ ಸರಕಾರದಿಂದ ಸವಲತ್ತು ದೊರೆಯುತ್ತಿದೆ. ಆದರೆ ಶೇಕಡಾ 75% ಅಂಗವಿಕಲತೆಯನ್ನು ಹೊಂದಿರುವವರ ಸಂಖ್ಯೆ ಬಹಳ ಕಡಿಮೆ ಇರುವುದರಿಂದ ಅಂಗವಿಕಲತೆ ಪ್ರಮಾಣವನ್ನು ಶೇಕಡಾ 60% ಇಳಿಕೆ ಮಾಡಿದ್ದಲ್ಲಿ ಹೆಚ್ಚಿನ ಮಂದಿ ಸರ್ಕಾರದ ಸೌಲಭ್ಯಗಳನ್ನು ಪಡೆಯಬಹುದು. ಆದ್ದರಿಂದ ಕೇಂದ್ರ ಸರ್ಕಾರದ ಮಟ್ಟದಲ್ಲಿ ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಮಾನ್ಯ ಕೇಂದ್ರ ಕೃಷಿ ಹಾಗೂ ರೈತ ಕಲ್ಯಾಣ ರಾಜ್ಯ ಸಚಿವರಾದ ಶೋಭಾ ಕರಂದ್ಲಾಜೆ ಅವರಲ್ಲಿ ಮನವಿ ಮಾಡಿದರು. ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ ಕೇಂದ್ರ ಸಚಿವರು ತಮ್ಮ ಮನವಿಯನ್ನು ಕೇಂದ್ರ ಸರ್ಕಾರದಲ್ಲಿ ಚರ್ಚಿಸಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ನಗರ ಬಿಜೆಪಿ ಅಧ್ಯಕ್ಷರಾದ ಮಹೇಶ್ ಠಾಕೂರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಉಡುಪಿ ನಗರ ಸಭೆಯ ಉಪಾಧ್ಯಕ್ಷರಾದ ಲಕ್ಷ್ಮೀ ಮಂಜುನಾಥ ಕೊಳ, ನಗರ ಸಭಾ ಸದಸ್ಯರಾದ ವಿಜಯ್ ಕೊಡವೂರು, ಯೋಗೀಶ್ ಸಾಲ್ಯಾನ್, ಸುಂದರ್ ಕಲ್ಮಾಡಿ, ನಗರ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಮಂಜುನಾಥ್ ಮಣಿಪಾಲ್, ದಿನೇಶ್ ಅಮೀನ್ ಹಾಗೂ ಪ್ರಮುಖರು ಉಪಸ್ಥಿತರಿದ್ದರು.

- Advertisement -

ಸಂಬಂಧಿತ ಸುದ್ದಿ

Leave a Reply

ಛಾಯಾಂಕಣ

ಇತ್ತೀಚಿನ ಸುದ್ದಿ

error: Content is protected !!