ಉಡುಪಿ ನಗರಸಭೆ ಅಧ್ಯಕ್ಷರಾಗಿ ಸುಮಿತ್ರಾ ಆರ್ ನಾಯಕ್ ..?  

ಸರಕಾರದಿಂದ ನಗರಸಭಾ ಅಧ್ಯಕ್ಷ ಸ್ಥಾನಕ್ಕೆ ಹಿಂದುಳಿದ ವರ್ಗದ ಮಹಿಳೆ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಮಹಿಳೆಯನ್ನು ಆಯ್ಕೆ ಮಾಡುವಂತೆ ಆದೇಶಿಸಲಾಗಿದ್ದು, ಈ ಪ್ರಯುಕ್ತ ಇಂದು ದಿನಾಂಕ 27-10-2020 ರಂದು ನಗರ ಬಿಜೆಪಿ ಆಶ್ರಯದಲ್ಲಿ, ನಗರ ಬಿಜೆಪಿ ಅಧ್ಯಕ್ಷರಾದ ಮಹೇಶ್ ಠಾಕೂರ್ ಅವರ ಅಧ್ಯಕ್ಷತೆಯಲ್ಲಿ  ನಡೆದ ನಗರಸಭೆಯ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರ ಆಯ್ಕೆಯ ಪೂರ್ವಭಾವಿ ಸಭೆಯಲ್ಲಿ ಶಾಸಕರಾದ ಕೆ ರಘುಪತಿ ಭಟ್ ರವರು ಭಾಗವಹಿಸಿದರು.ಈ ಸಂದರ್ಭದಲ್ಲಿ ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್, ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ದಿನಕರ್ ಬಾಬು, ಕರಾ ವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಮಟ್ಟಾರು ರತ್ನಾಕರ್ ಹೆಗ್ಡೆ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ರಾಘವೇಂದ್ರ ಕಿಣಿ, ಜಿಲ್ಲಾ ಬಿಜೆಪಿ ಉಪಾಧ್ಯಕ್ಷರುಗಳಾದ ರವಿ ಅಮೀನ್, ಯಶ್ಪಾಲ್ ಸುವರ್ಣ, ಪ್ರಧಾನ ಕಾರ್ಯದರ್ಶಿಗಳಾದ ಮನೋಹರ್ ಕಲ್ಮಾಡಿ, ನಗರ ಬಿಜೆಪಿ ಪ್ರಧಾನ ಕಾರ್ಯದರ್ಶಿ ದಿನೇಶ್ ಅಮೀನ್, ನಗರಸಭೆಯ ಮಾಜಿ ಅಧ್ಯಕ್ಷರಾದ ದಿನಕರ್ ಶೆಟ್ಟಿ, ಮಾಜಿ ನಗರಸಭಾ ಸದಸ್ಯರಾದ ಮೋಹನ್ ಉಪಾಧ್ಯ ಹಾಗೂ ನಗರಸಭಾ ಸದಸ್ಯರು ಉಪಸ್ಥಿತರಿದ್ದರು.

​ಮಾಹಿತಿ ಪ್ರಕಾರ  ಪರ್ಕಳ  ಸುಮಿತ್ರ ನಾಯಕ್  ​ಬಹುತೇಕ ಅಧ್ಯಕ್ಷ ಹುದ್ದೆಗೆ ಆಯ್ಕೆಯಾಗಿದ್ದಾರೆ ಎಂದು ತಿಳಿದು ಬಂದಿದೆ..? 
 
 
 
 
 
 
 
 
 
 
 

Leave a Reply