Janardhan Kodavoor/ Team KaravaliXpress
28.6 C
Udupi
Thursday, August 11, 2022
Sathyanatha Stores Brahmavara

ಕಾರ್ಯಕರ್ತರ ಪರಿಶ್ರಮದಿಂದ ಅತಿದೊಡ್ಡ ಪಕ್ಷವಾಗಿ ಬಿಜೆಪಿ ಹೊರಹೊಮ್ಮಿದೆ – ಶಾಸಕ ರಘುಪತಿ ಭಟ್

ನಿಸ್ವಾರ್ಥ ಸೇವೆಯನ್ನು ಸಲ್ಲಿಸುವ ಕಾರ್ಯಕರ್ತರ ಪರಿಶ್ರಮದಿಂದ ಭಾರತೀಯ ಜನತಾ ಪಾರ್ಟಿ ಗ್ರಾಮ ಮಟ್ಟದಿಂದ ರಾಷ್ಟ್ರ ಮಟ್ಟದವರೆಗೆ ಬೆಳೆದು ಇಂದು ವಿಶ್ವದ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ ಎಂದು ಶಾಸಕ ಕೆ ರಘುಪತಿ ಭಟ್ ಹೇಳಿದರು. ಶ್ರೀ ನಾರಾಯಣ ಗುರು ಸಭಾಭವನ ಬ್ರಹ್ಮಾವರ ಇಲ್ಲಿ ದಿನಾಂಕ 30-10-2020 ರಂದು ನಡೆದ ಭಾರತೀಯ ಜನತಾ ಪಾರ್ಟಿ ಉಡುಪಿ ಗ್ರಾಮಾಂತರ ವಿಶೇಷ ಕಾರ್ಯಕಾರಣಿ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು.

ದೇಶದಲ್ಲಿ, ರಾಜ್ಯದಲ್ಲಿ, ಗ್ರಾಮಮಟ್ಟದ ಆಡಳಿತದಲ್ಲಿ ಬಿಜೆಪಿ ಇದೆ. ನಾವು ನೀಡಿದ ಭರವಸೆಯಂತೆ ಕೈಗೊಂಡ ಅಭಿವೃದ್ಧಿ ಕಾರ್ಯಕ್ರಮಗಳ ಬಗ್ಗೆ ಜನರಿಗೆ ಮನವರಿಕೆ ಮಾಡಿಕೊಡಬೇಕು. ಹಾಗೂ ಜನರ ಕಲ್ಯಾಣಕ್ಕಾಗಿ ಕೇಂದ್ರ – ರಾಜ್ಯ ಸರ್ಕಾರ ಹಮ್ಮಿಕೊಂಡ ಕಾರ್ಯಕ್ರಮಗಳ ಸದುಪಯೋಗ ಕಟ್ಟಕಡೆಯ ಜನಸಾಮಾನ್ಯನೂ ಪಡೆಯುವಂತೆ ಕಾರ್ಯಕರ್ತರು ಕೆಲಸ ಮಾಡಬೇಕು ಎಂದು ಅವರು ಹೇಳಿದರು.

ಉಡುಪಿ ಬಿಜೆಪಿ ಪ್ರಭಾರಿ, ಮೂಡುಬಿದಿರೆ – ಮೂಲ್ಕಿ ಶಾಸಕ ಉಮಾನಾಥ್ ಕೋಟ್ಯಾನ್ ಗ್ರಾಮಾಂತರ ವಿಶೇಷ ಕಾರ್ಯಕಾರಿಣಿ ಸಭೆ ಉದ್ಘಾಟಿಸಿ ಪಕ್ಷ ಸಂಘಟನೆ ಕುರಿತು ಮಾಹಿತಿ ನೀಡಿದರು. ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮನೋಹರ್ ಕಲ್ಮಾಡಿ ಸಂಘಟನೆ ಕುರಿತು ಮಾಹಿತಿ ನೀಡಿದರು. ಉಡುಪಿ ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ಶೀಲಾ ಕೆ. ಶೆಟ್ಟಿ ಮಾತನಾಡಿರು.

ಗ್ರಾಮಾಂತರ ಬಿಜೆಪಿ ಅಧ್ಯಕ್ಷರಾದ ವೀಣಾ ನಾಯ್ಕ್ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಪಂಚಾಯತ್ ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷರಾದ ಪ್ರತಾಪ್ ಹೆಗ್ಡೆ ಮಾರಾಳಿ, ಬ್ರಹ್ಮಾವರ ತಾಲೂಕು ಪಂಚಾಯತ್ ಉಪಾಧ್ಯಕ್ಷರಾದ ಶ್ರೀ ಸುಧೀರ್ ಶೆಟ್ಟಿ, ಮಂಡಲದ ಪ್ರಭಾರಿ ಸದಾನಂದ ಬಳ್ಕೂರು, ಗ್ರಾಮಾಂತರ ಬಿಜೆಪಿಯ ಪ್ರಧಾನ ಕಾರ್ಯದರ್ಶಿ ವಿಶು ಕಲ್ಯಾಣಪುರ ಉಪಸ್ಥಿತರಿದ್ದರು. ಕಮಲಾಕ್ಷ ಹೆಬ್ಬಾರ್ ಕಾರ್ಯಕ್ರಮ ನಿರೂಪಿಸಿದರು. ಗ್ರಾಮಾಂತರ ಪ್ರಧಾನ ಕಾರ್ಯದರ್ಶಿ ಅಶೋಕ್ ಹೇರೂರು ಸ್ವಾಗತಿಸಿದರು.

- Advertisement -

ಸಂಬಂಧಿತ ಸುದ್ದಿ

Leave a Reply

ಛಾಯಾಂಕಣ

ಇತ್ತೀಚಿನ ಸುದ್ದಿ

error: Content is protected !!