ನಿಮ್ಮ ಪಾಪದ ಸಂಪಾದನೆಯಲ್ಲಿ ಲಸಿಕೆ ಪಡೆಯುವ ಅನಿವಾರ್ಯತೆ ಕರ್ನಾಟಕದ ಜನತೆಗಿಲ್ಲ – ಬಿಜೆಪಿ ಟಾಂಗ್

ಬೆಂಗಳೂರು: ಉಚಿತ ಲಸಿಕೆಯನ್ನು ಜನರಿಗೆ ಕೊಡಲು ಸರ್ಕಾರಕ್ಕೆ ಸಾಧ್ಯವಾಗದಿದ್ದರೆ ಹೇಳಲಿ, ನಾವು ಸಹಾಯ ಮಾಡುತ್ತೇವೆ ಎಂದಿದ್ದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿಗೆ ಬಿಜೆಪಿ ಖಡಕ್ ತಿರುಗೇಟು ನೀಡಿದೆ.

ರಾಜ್ಯ ಬಿಜೆಪಿ ಟ್ವಿಟರ್‌ ಹ್ಯಾಂಡಲ್‌ನಲ್ಲಿ ಈ ಕುರಿತು ಬರೆಯಲಾಗಿದ್ದು, ಡಿ.ಕೆ. ಶಿವಕುಮಾರ್ ಅವರೇ ಲಸಿಕೆ ಬಗ್ಗೆ ಅಪಪ್ರಚಾರ ಮಾಡಿದಷ್ಟು ಸುಲಭವಾಗಿ ಸಹಾಯ ಮಾಡಲು ಸಾಧ್ಯವಿಲ್ಲ ಎಂದು ಟೀಕಿಸಲಾಗಿದೆ.ಅಷ್ಟಕ್ಕೂ ನಿಮ್ಮ ಪಾಪದ ಸಂಪಾದನೆಯಲ್ಲಿ ಲಸಿಕೆ ಹಾಕಿಸಿಕೊಳ್ಳಬೇಕಾದ ಅನಿವಾರ್ಯತೆ ರಾಜ್ಯದ ಜನತೆಗೆ ಬಂದಿಲ್ಲ ಎಂದು ಬಿಜೆಪಿ ಟಾಂಗ್ ನೀಡಿದೆ.

ಕಾಂಗ್ರೆಸ್ ಪಕ್ಷದ ಶಾಸಕರು ಮತ್ತು ಸಂಸದರ‌ ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿಯಿಂದ ತಲಾ 1 ಕೋಟಿ ರೂ ಸೇರಿದಂತೆ 100 ಕೋಟಿಯ ರೂಗಳನ್ನು ಕೋವಿಡ್ ಲಸಿಕೆ ಖರೀದಿಗಾಗಿ ಸರ್ಕಾರಕ್ಕೆ ಒಪ್ಪಿಸಲು ಕಾಂಗ್ರೆಸ್ ನಿರ್ಧರಿಸಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ರೊಂದಿಗೆ ಶುಕ್ರವಾರ ಜಂಟಿ ಪತ್ರಿಕಾಗೋಷ್ಠಿ ನಡೆಸಿದ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಈ ವಿಷಯ ಪ್ರಕಟಿಸಿದ್ದರು.

 
 
 
 
 
 
 
 
 
 
 

Leave a Reply