ನರೇಂದ್ರ ಮೋದಿ ಅವರ ನೇತೃತ್ವದ 8 ವರ್ಷದ ಕೇಂದ್ರ ಸರಕಾರದ ಆಡಳಿತದಲ್ಲಿ ಸೇವೆ, ಸುಶಾಸನ ಮತ್ತು ಬಡವರ ಕಲ್ಯಾಣ ಕಾರ್ಯಕ್ರಮ

ದಿನಾಂಕ 05-06-2022 ರಂದು ಭಾರತೀಯ ಜನತಾ ಪಾರ್ಟಿ ಉಡುಪಿ ಗ್ರಾಮಾಂತರ ಹಾಗೂ ಎಸ್.ಟಿ ಮೋರ್ಚಾದ ವತಿಯಿಂದ ಚಾಂತಾರು ಶ್ರೀ ಮಹಿಷಮರ್ದಿನಿ ಗದ್ದುಗೆ ಸಭಾಭವನದಲ್ಲಿ ಆಯೋಜಿಸಲಾದ “ನರೇಂದ್ರ ಮೋದಿ ಅವರ ನೇತೃತ್ವದ 8 ವರ್ಷದ ಕೇಂದ್ರ ಸರಕಾರದ ಆಡಳಿತದಲ್ಲಿ ಸೇವೆ, ಸುಶಾಸನ ಮತ್ತು ಬಡವರ ಕಲ್ಯಾಣ” ಕಾರ್ಯಕ್ರಮದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ 90 ಶೇಕಡಕ್ಕಿಂತ ಹೆಚ್ಚು ಅಂಕ ಪಡೆದ ಪರಿಶಿಷ್ಟ ಪಂಗಡ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಶಾಸಕರಾದ ಕೆ. ರಘುಪತಿ ಭಟ್, ಬಿಜೆಪಿ ಉಡುಪಿ ಜಿಲ್ಲಾ ಅಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್, ಗ್ರಾಮಾಂತರ ಬಿಜೆಪಿ ಅಧ್ಯಕ್ಷರಾದ ವೀಣಾ ನಾಯ್ಕ್, ರಾಜ್ಯ ಬಿಜೆಪಿ ಎಸ್.ಟಿ ಮೋರ್ಚಾದ ಕಾರ್ಯದರ್ಶಿಗಳಾದ ಉಮೇಶ್ ನಾಯ್ಕ್, ಎಸ್.ಟಿ ಮೋರ್ಚಾದ ಜಿಲ್ಲಾಧ್ಯಕ್ಷರಾದ ನಿತ್ಯಾನಂದ ನಾಯ್ಕ್, ಪ್ರಧಾನ ಕಾರ್ಯದರ್ಶಿಗಳಾದ ಸುರೇಶ್ ನಾಯ್ಕ್, ಜಿಲ್ಲಾ ಬಿಜೆಪಿ ಕಾರ್ಯದರ್ಶಿಗಳಾದ ನಳಿನಿ ಪ್ರದೀಪ್ ರಾವ್, ಜಿಲ್ಲಾ ವಕ್ತಾರರಾದ ಗುರುಪ್ರಸಾದ್, ಗ್ರಾಮಾಂತರ ಎಸ್.ಟಿ ಮೋರ್ಚಾದ ಅಧ್ಯಕ್ಷರಾದ ಸುಬ್ರಹ್ಮಣ್ಯ ನಾಯ್ಕ್, ಚಾಂತಾರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಮೀರಾ ಸದಾನಂದ ಪೂಜಾರಿ, ಉಪಾಧ್ಯಕ್ಷರಾದ ಲಕ್ಷ್ಮೀ, ಗ್ರಾಮಾಂತರ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಗಣೇಶ್ ಕುಲಾಲ್, ಸಚಿನ್ ಪೂಜಾರಿ ಹಾಗೂ ಪಕ್ಷದ ಹಿರಿಯರು, ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.

 
 
 
 
 
 
 
 
 
 
 

Leave a Reply