ಯೋಗದಿಂದ ವ್ಯಕ್ತಿತ್ವವಿಕಸನದ ಜೊತೆಗೆ ದೇಶದ ಸಮಗ್ರ ಸಂಸ್ಕ್ರತಿಯ ಬೆಳವಣಿಗೆ – ಸಂಸದೆ ಶೋಭಾ ಕರಂದ್ಲಾಜೆ

ಮಣಿಪಾಲ: ಯೋಗಾಸನ ನಮ್ಮ ದೇಶದ ಪುರಾತನ ಸಂಸ್ಕ್ರತಿಯ ವಿಶೇಷ ಭಾಗವಾಗಿದ್ದು ಇಂದು ವಿಶ್ವದಲ್ಲಿಯೇ ಇದಕ್ಕೆ ವಿಶೇಷ ಮಾನ್ಯತೆ ಇದೆ.ವಿಶ್ವದಲ್ಲಿ ಇದಕ್ಕೆ ವಿಶೇಷ ಮೌಲ್ಯವನ್ನುನೀಡುವಲ್ಲಿ ನಮ್ಮ ಪ್ರಧಾನಿ ನರೇಂದ್ರ ಮೋದಿಯವರ ಪಾತ್ರ ಮಹತ್ವಪೂರ್ಣವಾಗಿದೆ.ಯೋಗವನ್ನು ತನ್ನ ಜೀವನದಲ್ಲಿ ಅಳವಡಿಸಿ ಕೊಂಡ ಪ್ರತಿಯೊಬ್ಬ ಪ್ರಜೆಯೂ ತನ್ನ ವ್ಯಕ್ತಿತ್ವ ವಿಕಸನ ಮಾಡಿಕೊಳ್ಳುವುದಲ್ಲದೆ ದೇಶ ಸಂಸ್ಕ್ರತಿಯನ್ನು ಕಾಪಾಡಿ ಬೆಳೆಸಲು ಸಹಯೋಗ ನೀಡುತ್ತಾನೆ. ಇದನ್ನು ಮನಗೊಂಡ ಜಗತ್ತಿನ ನೂರಕ್ಕಿಂತಲೂ ಅಧಿಕ ದೇಶಗಳು ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಬಹಳ ಅರ್ಥಪೂರ್ಣವಾಗಿ ಆಚರಿಸುತ್ತಿವೆ ಎಂದು ಉಡುಪಿ ಚಿಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಹೇಳಿದರು.

ಸೋಮವಾರ ಮಣಿಪಾಲದ ಕಂಟ್ರಿ ಇನ್ ಹೋಟೆಲ್ ಇನ್ ಹೋಟೆಲ್ ಸಭಾಂಗಣದಲ್ಲಿ ಭಾರತೀಯ ಜನತಾ ಪಾರ್ಟಿ ಉಡುಪಿ ನಗರ ಆಶ್ರಯದಲ್ಲಿ ಆಯೋಜಿಸಿದ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದರು.

ಉಡುಪಿ ಅರ್ಹ ಯೋಗ ವಿಜ್ಞಾನ ಕೇಂದ್ರದ ಸ್ಥಾಪಕಿ ಪ್ರಕ್ರತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನ ವೈದ್ಯೆ ಡಾ. ಸ್ಪೂರ್ತಿ ಎ ಶೆಟ್ಟಿ ಯೋಗ ಉಪನ್ಯಾಸ ಮತ್ತು ಪ್ರಾತ್ಯಕ್ಷಿಕೆ ನೀಡಿದರು. ಬಳಿಕ ಪಕ್ಷದ ವತಿಯಿಂದ ಅವರನ್ನು ಗೌರವಿಸಲಾಯಿತು.ನಗರ ಬಿಜೆಪಿ ಅಧ್ಯಕ್ಷ ಮಹೇಶ್ ಠಾಕೂರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು.

ಜಿಲ್ಲಾ ಬಿಜೆಪಿ ಅಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್,ಉಪಾಧ್ಯಕ್ಷ ಪೆರ್ಣಂಕಿಲ ಶ್ರೀಶ ನಾಯಕ್ , ಪ್ರಧಾನ ಕಾರ್ಯದರ್ಶಿ ಕುತ್ಯಾರು ನವೀನ ಶೆಟ್ಟಿ,ರಾಷ್ಟ್ರ ಹಿಂದುಳಿದ ವರ್ಗಗಳ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಯಶಪಾಲ್ ಸುವರ್ಣ, ಕರಾವಳಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ್ ಹೆಗ್ಡೆ, ರಾಜ್ಯ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ್ ಬಾಳೆಕಾಯಿ, ನಗರಸಭೆಯ ಅಧ್ಯಕ್ಷೆ ಸುಮಿತ್ರಾ ಆರ್ ನಾಯಕ್ ಮತ್ತಿತರರು ಉಪಸ್ಥಿತರಿದ್ದರು. ನಗರ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಮಂಜುನಾಥ್ ಮಣಿಪಾಲ ಮತ್ತು ದಿನೇಶ್ ಅಮೀನ್ ಕಾರ್ಯಕ್ರಮ ಸಂಯೋಜಿಸಿ ನಿರ್ವಹಿಸಿದರು.

 
 
 
 
 
 
 
 
 
 
 

Leave a Reply