ಉಡುಪಿಯಲ್ಲಿ ಒಂದೇ ದಿನ ಇಬ್ಬರನ್ನು ಬಲಿ ಪಡಕೊಂಡ ಬ್ಲ್ಯಾಕ್ ಫಂಗಸ್‌

ಉಡುಪಿ: ಕೆಎಂಸಿ ಆಸ್ಪತ್ರೆಯಲ್ಲಿ ಬ್ಲ್ಯಾಕ್ ಫಂಗಸ್ ಸೋಂಕಿಗೆ ಚಿಕಿತ್ಸೆ ಪಡೆಯುತ್ತಿದ್ದ ಇಬ್ಬರು ರೋಗಿಗಳು ಇಂದು ಮೃತಪಟ್ಟಿದ್ದಾರೆ. ಚಿತ್ರದುರ್ಗ ಜಿಲ್ಲೆಯ ಪುರುಷ ಹಾಗೂ ಹಾವೇರಿ ಜಿಲ್ಲೆಯ ಮಹಿಳೆ ಮೃತಪಟ್ಟವವರು. ಇದರೊಂದಿಗೆ ಜಿಲ್ಲೆಯಲ್ಲಿ ಬ್ಲ್ಯಾಕ್ ಫಂಗಸ್ ಗೆ ಬಲಿಯಾದವರ ಸಂಖ್ಯೆ ನಾಲ್ಕಕ್ಕೇರಿದಂತಾಗಿದೆ.

ಈ ಮೊದಲು ಕಪ್ಪು ಶಿಲೀಂದ್ರಕ್ಕೆ ( ಬ್ಲ್ಯಾಕ್ ಫಂಗಸ್) ಉಡುಪಿ ಜಿಲ್ಲೆಯ ಇಬ್ಬರು ಬಲಿಯಾಗಿದ್ದರು. ಜಿಲ್ಲೆಯಲ್ಲಿ ಇನ್ನೂ ಎಂಟು ಮಂದಿ ಕಪ್ಪು ಶಿಲೀಂದ್ರ ಸೋಂಕಿಗೆ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಆರೋಗ್ಯ ಇಲಾಖೆ ಮೂಲಗಳು ತಿಳಿಸಿವೆ.

ಅಧಿಕ ಸಕ್ಕರೆ ಅಂಶ ಇರುವ ರೋಗಿಗಳಲ್ಲದೆ, ಸಣ್ಣ ಆಸ್ಪತ್ರೆ ಮತ್ತು ಮನೆಗಳಲ್ಲಿ ಚಿಕಿತ್ಸೆ ಪಡೆದವರಲ್ಲೂ ರೋಗ ಕಾಣಿಸಿಕೊಂಡಿದೆ. ಇದಲ್ಲದೆ, ದೀರ್ಘ ಕಾಲ ಚಿಕಿತ್ಸೆ ಪಡೆದವರು, ಹೆಚ್ಚು ಅವಧಿ ಮತ್ತು ಡೋಸ್‌ಗಳ ಸ್ಟಿರಾಯ್ಡ್‌ ಪಡೆದವರಲ್ಲೂ ರೋಗ ಕಾಣಿಸಿಕೊಳ್ಳುತ್ತಿದೆ ಎಂದು ತಜ್ಞರು ಅಭಿಪ್ರಾಯ ಪಟ್ಟಿದ್ದಾರೆ. 

 

 
 
 
 
 
 
 
 
 
 
 

Leave a Reply