ಡಿಕೆಶಿ ಯಾವ ಇಂಟೆಲಿಜೆನ್ಸ್ ರಿಪೋರ್ಟ್ ತೆಗೆದುಕೊಂಡಿದ್ದಾರೋ ಗೊತ್ತಿಲ್ಲ: ಗೃಹ ಸಚಿವ ಬೊಮ್ಮಾಯಿ

ಕಾರ್ಕಳ: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸಿಎಂ ಮೇಲೆ ಸಾರ್ವಜನಿಕರು ದಾಳಿ ಮಾಡುತ್ತಾರೆ ಎಂದಿದ್ದರು,ಗೃಹಸಚಿವ ಬಸವರಾಜ್ ಬೊಮ್ಮಾಯಿ ಕಾರ್ಕಳದಲ್ಲಿ ತಿರುಗೇಟು ನೀಡಿದ್ದಾರೆ.

ಡಿಕೆಶಿ ಯಾವ ಇಂಟೆಲಿಜೆನ್ಸ್ ರಿಪೋರ್ಟ್ ತೆಗೆದುಕೊಂಡಿದ್ದಾರೋ ಗೊತ್ತಿಲ್ಲ, ಅಂತಹ ಇಂಟೆಲಿಜೆನ್ಸ್ ರಿಪೋರ್ಟ್ ನಮ್ಮಲ್ಲಿಲ್ಲ.ಮುಖ್ಯಮಂತ್ರಿಗಳು ರಾಜ್ಯಾದ್ಯಂತ ಜಿಲ್ಲಾ ಪ್ರವಾಸ ಮಾಡುತ್ತಿದ್ದಾರೆ.

ಯಡಿಯೂರಪ್ಪ ಜನರಿಂದ ,ಜನರ ಮಧ್ಯದಿಂದ ಬಂದವರು.ಹೋರಾಟಗಳನ್ನು ಮಾಡಿ ಮುಖ್ಯಮಂತ್ರಿ ಆದವರು. ಯಡಿಯೂರಪ್ಪ ಯಾವತ್ತೂ ಜನರ ಜೊತೆಗೆ ಇರುವವರು.ಜನರ ಮಧ್ಯೆ ಹೋಗಲು ಸಿಎಂಗೆ ಯಾವುದೇ ತೊಂದರೆ ಇಲ್ಲ. ಆತಂಕಗಳು ಏನಿದ್ದರೂ ಅದು ಕಾಂಗ್ರೆಸ್ ಪಕ್ಷಕ್ಕೆ ಮಾತ್ರ ಎಂದು ಡಿಕೆಶಿಗೆ ತಿರುಗೇಟು ಕೊಟ್ಟಿದ್ದಾರೆ.

ಇದೇ ವೇಳೆ ಜಾರಕಿಹೊಳಿ ಮುಂಬೈ ಪ್ರವಾಸ ವಿಚಾರವಾಗಿ ಮಾತನಾಡಿದ ಗೃಹ ಸಚಿವರು,ನನಗೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ, ಹಾಗಾಗಿ ನಾನು ಏನೂ ಮಾತನಾಡುವುದಿಲ್ಲ ಎಂದು ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

 
 
 
 
 
 
 
 
 
 
 

Leave a Reply