ಮಂಗಳೂರು ಪತ್ರಕರ್ತನ ಕುಟುಂಬಕ್ಕೆ ಪರಿಹಾರ ಮಂಜೂರು ಮಾಡಿದ ಸಿಎಂ

ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ (KUWJ) ಮನವಿ ಮೇರೆಗೆ, ದಕ್ಷಿಣ ಕನ್ನಡ ಜಿಲ್ಲೆ ಮೂಲ್ಕಿ ತಾಲ್ಲೂಕಿನ ಪತ್ರಕರ್ತ ಯಶವಂತ ಅವರ ಕುಟುಂಬಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಒಂದು ಲಕ್ಷ ರೂ ಪರಿಹಾರ ಮಂಜೂರು ಮಾಡಿದ್ದಾರೆ.

ವಿಜಯ ಕರ್ನಾಟಕ ಪತ್ರಿಕೆ ಸೇರಿದಂತೆ ಹಲವು ಮಾಧ್ಯಮದಲ್ಲಿ ಎರಡು ದಶಕಗಳ ಕಾಲ ಕೆಲಸ‌ ಮಾಡಿದ್ದ ಯಶವಂತ ಕೋವಿಡ್ ಗೆ ಬಲಿಯಾಗಿದ್ದರು. ಅವರ ಕುಟುಂಬ ಸಂಕಷ್ಟದಲ್ಲಿರುವ ಬಗ್ಗೆ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘ ರಾಜ್ಯ ಸಂಘದ ಗಮನಕ್ಕೆ ತಂದಿತ್ತು.
ಪರಿಹಾರ ಕೊಡುವಂತೆ ರಾಜ್ಯ ಸಂಘದ ಅಧ್ಯಕ್ಷರಾದ ಶಿವಾನಂದ ತಗಡೂರು ಅವರು ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದರು.

ಪರಿಹಾರ ಮಂಜೂರು ಮಾಡಿದ‌ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ ಧನ್ಯವಾದ ಸಲ್ಲಿಸಿದೆ.

 
 
 
 
 
 
 
 
 
 
 

Leave a Reply