ಬ್ರಹ್ಮಾವರ ಸಕ್ಕರೆ ಕಾರ್ಖಾನೆ ಇತೆನಾಲ್ ಉತ್ಪಾದನೆಗೆ ಕೇಂದ್ರ ಸರಕಾರದ ಬೆಂಬಲ :ಶೋಭಾ ಕರಂದ್ಲಾಜೆ ಭರವಸೆ

ಉಡುಪಿ: ಕೇಂದ್ರದ ಕೃಷಿ ಮತ್ತು ರೈತ ಕಲ್ಯಾಣ ಸಚಿವೆಯಾದ ಶೋಭಾ ಕರಂದ್ಲಾಜೆಯನ್ನು ಭೇಟಿ ಮಾಡಿದ ಬ್ರಹ್ಮಾವರ ಸಕ್ಕರೆ ಕಾರ್ಖಾನೆಯ ಅಧ್ಯಕ್ಷ ಬೈಕಾಡಿ ಸುಪ್ರಸಾದ್ ಶೆಟ್ಟಿ ಕೇಂದ್ರ ಸಚಿವರೊಂದಿಗೆ ಸಮಾಲೋಚನೆ ಮಾಡಿ ಬ್ರಹ್ಮಾವರ ಸಕ್ಕರೆ ಕಾರ್ಖಾನೆಯಲ್ಲಿ ಇಥೆನಾಲ್ ಉತ್ಪಾದಿಸುವ ಘಟಕವನ್ನು ಪ್ರಾರಂಭಿಸುವ ಯೋಜನೆಯನ್ನು ಮಾಡಿದ್ದು ಕೇಂದ್ರ ಸರ್ಕಾರ ಸಂಪೂರ್ಣ ಸಹಕಾರ ನೀಡಬೇಕು ಎನ್ನುವ ಮನವಿ ಮಾಡಿದರು.

ಮನವಿಗೆ ಸ್ಪಂದಿಸಿದ ಕೇಂದ್ರ ಕೃಷಿ ಸಚಿವೆ ಶೋಭಾ ಕರಂದ್ಲಾಜೆ ಭರವಸೆಯನ್ನು ನೀಡಿ ಬ್ರಹ್ಮಾವರ ಸಕ್ಕರೆ ಕಾರ್ಖಾನೆಯಲ್ಲಿ ಪ್ರಾರಂಭಿಸುವ ಎಥೆನಾಲ್ ಘಟಕಕ್ಕೆ ಕೇಂದ್ರ ಸರಕಾರ ಬೆಂಬಲ ನೀಡುವುದಾಗಿ ಹೇಳಿದರು.

ಬಿಜೆಪಿಯ ಜಿಲ್ಲಾ ಅಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ವಿಭಾಗ ಪ್ರಭಾರಿ ಕೆ ಉದಯ ಕುಮಾರ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಕುತ್ಯಾರ್ ನವೀನ್ ಶೆಟ್ಟಿ ಉಪಸ್ಥಿತರಿದ್ದರು.

 
 
 
 
 
 
 
 
 
 
 

Leave a Reply