ಸ.ಮಾ.ಹಿ.ಪ್ರಾ.ಶಾಲೆ ಬ್ರಹ್ಮಾವರದಲ್ಲಿ ಅರಿವು ಕಾರ್ಯಕ್ರಮ

ಚೈಲ್ಡ್ ಲೈನ್-1098, ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಬಾಲಕಾರ್ಮಿಕ ಯೋಜನಾ ಸಂಘ, ಕಾರ್ಮಿಕ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಮತ್ತು ರೋಟರಿ
ಉಡುಪಿ ಇವರ ಸಹಯೋಗದೊಂದಿಗೆ ಮಕ್ಕಳ ದಿನಾಚರಣೆ ಮತ್ತು ಚೈಲ್ಡ್ ಲೈನ್ ಸೇ ದೋಸ್ತಿ ಸಪ್ತಾಹದ ಅಂಗವಾಗಿ ಸರ್ಕಾರಿ ಪ್ರಾಥಮಿಕ ಶಾಲೆ ಬ್ರಹ್ಮಾವರ ಇಲ್ಲಿ ಮಕ್ಕಳ ರಕ್ಷಣೆಯ ಕುರಿತು ಅರಿವು ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಕಾರ್ಯಕ್ರಮದ
ಮೊದಲಿಗೆ ಧನ್ವಂತರಿ ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿಗಳು ಹೆಣ್ಣು ಮಕ್ಕಳ ಸಬಲೀಕರಣದ ಕುರಿತು ಕಿರುಪ್ರಹಸನವನ್ನು
ಪ್ರಸ್ತುತಪಡಿಸಿದರು. ನಂತರ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಬ್ರಹ್ಮಾವರ ಪೊಲೀಸ್ ಠಾಣೆಯ ಪೊಲೀಸ್ ಸಬ್ ಇನ್ಸ್‍ಪೆಕ್ಟರ್ ಶ್ರೀಮತಿ ಮುಕ್ತಾಬಾಯಿ, ಇವರು ಮಕ್ಕಳ ಹಕ್ಕುಗಳ ರಕ್ಷಣೆ ಮಕ್ಕಳ ಮೇಲಾಗುವ ದೈಹಿಕ ಮತ್ತು ಲೈಂಗಿಕ ದೌರ್ಜನ್ಯಗಳ ಮತ್ತು
ಫೋಕ್ಸೋ ಕಾಯಿದೆಯ ಕುರಿತು ಮಕ್ಕಳಿಗೆ ಅರಿವನ್ನು ಮೂಡಿಸಿದರು. ಮಕ್ಕಳು ಅಪರಿಚಿತರ ಕುರಿತಾಗಿ ಸದಾ ಎಚ್ಚರದಿಂದ ಇರಬೇಕು
ಎಂದು ಹೇಳಿದರು. ಅಲ್ಲದೇ ಅಸುರಕ್ಷಿತ ಸ್ಪರ್ಶಗಳ ಕುರಿತು ಮಕ್ಕಳಿಗೆ ಅರಿವನ್ನು ಮೂಡಿಸಿದರು. ಬಾಲಕಾರ್ಮಿಕತೆ ಮತ್ತು ಬಾಲ್ಯ
ವಿವಾಹದ ಪರಿಣಾಮದ ಕುರಿತು ತಿಳಿಸಿ ಹೇಳಿದರು. ಅಲ್ಲದೇ ಮಕ್ಕಳೆಲ್ಲರೂ ಕಡ್ಡಾಯವಾಗಿ ಶಿಕ್ಷಣವನ್ನು ಪಡೆಯಬೇಕೆಂಬ
ಅರಿವನ್ನು ಮೂಡಿಸಿದರು ಹಾಗೂ ಮಕ್ಕಳು ತಮ್ಮನ್ನು ತಾವು ವ್ಯಕ್ತಿತ್ವ ವಿಕಸನಕ್ಕೆ ಪೂರಕವಾಗುವಂತಹ ವಿಷಯಗಳಲ್ಲಿ
ತೊಡಗಿಸಿಕೊಳ್ಳುವಂತೆ ತಿಳಿಸಿದರು. ಅಲ್ಲದೇ ಯಾವುದೇ ರೀತಿಯಾದ ಸಮಸ್ಯೆಯಾದಲ್ಲಿ ಚೈಲ್ಡ್ ಲೈನ್ 1098 ಇದಕ್ಕೆ ಕರೆ ಮಾಡಿ
ಸಹಾಯವನ್ನು ಪಡೆಯಲು ತಿಳಿಸಿದರು. ನಂತರ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಶಿಕ್ಷಣ ಸಂಯೋಜಕರಾದ ಶ್ರೀಯುತ
ಪ್ರಕಾಶ್.ಬಿ.ಬಿ ಶಿಕ್ಷಣದ ಮಹತ್ವದ ಕುರಿತು ಹಾಗೂ ಮಕ್ಕಳ ಹಕ್ಕು ಕರ್ತವ್ಯದ ಕುರಿತು ಮಾಹಿತಿಯನ್ನು ನೀಡಿದರು.
ಈ ಕಾರ್ಯಕ್ರಮದಲ್ಲಿ ಚೈಲ್ಡ್ ಲೈನ್-1098 ಉಡುಪಿಯ ಸಹನಿರ್ದೆಶಕರಾದ ಗುರುರಾಜ್ ಭಟ್, ಬ್ರಹ್ಮಾವರ ಪೊಲೀಸ್ ಠಾಣೆಯ
ಹೆಡ್ ಕಾನ್ಸ್‍ಸ್ಟೇಬಲ್ ಶ್ರೀ ಪ್ರವೀಣ್, ಎಸ್.ಡಿ.ಎಮ್.ಸಿಯ ಉಪಾದ್ಯಕ್ಷರಾದ ಶ್ರೀಮತಿ ಸರಿತಾ ಮತ್ತು ಚೈಲ್ಡ್ ಲೈನ್
ಸಿಬ್ಬಂದಿಗಳು, ಮಕ್ಕಳು ಉಪಸ್ಥಿತರಿದ್ದರು. ಚೈಲ್ಡ್ ಲೈನ್-1098 ಉಡುಪಿಯ ಕೇಂದ್ರ ಸಂಯೋಜಕಿ ಜ್ಯೋತಿ ಕಾರ್ಯಕ್ರಮವನ್ನು
ನಿರೂಪಿಸಿ, ಚೈಲ್ಡ್ ಲೈನ್-1098 ಉಡುಪಿಯ ನಿರ್ದೇಶಕರಾದ ರಾಮಚಂದ್ರ ಉಪಾಧ್ಯಾಯ ಇವರು ಸ್ವಾಗತಿಸಿ ಬ್ರಹ್ಮಾವರ ಸರ್ಕಾರಿ
ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯಿನಿ ಶ್ರೀಮತಿ ದೇವಕುಮಾರಿ ವಂದಿಸಿದರು.

 
 
 
 
 
 
 
 
 
 
 

Leave a Reply