ಬಿಲ್ಲಾಡಿಯ 5 ನೇ ವರ್ಷದ ಶಾರದೋತ್ಸವದ ಧಾರ್ಮಿಕ ಸಭಾ ಕಾರ್ಯಕ್ರಮ

ಬಿಲ್ಲಾಡಿ : ಸಾರ್ವಜನಿಕ ಶಾರದೋತ್ಸವ ಸಮಿತಿ ಬಿಲ್ಲಾಡಿ ಮತ್ತು ಬಿಲ್ಲಾಡಿ ಫ್ರೆಂಡ್ಸ್ ಯುವ ವೇದಿಕೆ ಇದರ ಆಶ್ರಯದಲ್ಲಿ ಆಯೋಜಿಸಿದ್ದ 5 ನೇ ವರ್ಷದ ಶಾರದೋತ್ಸವದ ಧಾರ್ಮಿಕ ಸಭಾ ಕಾರ್ಯಕ್ರಮವನ್ನು ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಶ್ ಪಾಲ್ ಸುವರ್ಣ ಉದ್ಘಾಟಿಸಿ ಶುಭ ಹಾರೈಸಿದರು.

ಸಮಾರಂಭದಲ್ಲಿ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಬಿ ಕೆ ಹೆಗ್ಡೆ, ಶಾರದೋತ್ಸವ ಸಮಿತಿಯ ಸ್ಥಾಪಕಾಧ್ಯಕ್ಷ ಪ್ರಥ್ವಿ ರಾಜ್ ಶೆಟ್ಟಿ, ಬಿಲ್ಲಾಡಿ ಫ್ರೆಂಡ್ಸ್ ಯುವ ವೇದಿಕೆ ಅಧ್ಯಕ್ಷ ಪ್ರಿಯದರ್ಶನ್ ಶೆಟ್ಟಿ, ಶಾರದೋತ್ಸವ ಸಮಿತಿ ಅಧ್ಯಕ್ಷ ನಾರಾಯಣ ನಾಯ್ಕ್, ಹೆಗ್ಗುಂಜೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಗಣೇಶ್ ಶೆಟ್ಟಿ ಮಂದಾರ್ತಿ ಮೊದಲಾದ ಗಣ್ಯರು ಉಪಸ್ಥಿತರಿದ್ದರು.

 
 
 
 
 
 
 
 
 
 
 

Leave a Reply