ವಿದ್ಯಾರ್ಜನೆಗೆ ಮನೋಧರ್ಮ ಮುಖ್ಯ : ಪ್ರಭಾ ಎಚ್.ಎಸ್

ಭಾರತೀಯ ವಿಕಾಸ ಟ್ರಸ್ಟ್ ಮಣಿಪಾಲ ಮತ್ತು ಕೆನರಾ ಬ್ಯಾಂಕ್ ಸರ್ಕಲ್ ಆಫೀಸ್ ಮಣಿಪಾಲ ಇವರ ಸಂಯಕ್ತ ಆಶ್ರಯದಲ್ಲಿ ಆಯೋಜಿಸಲಾದ ಬಟ್ಟೆ ಮತ್ತು ಪೇಪರ್ ಚೀಲ ತಯಾರಿಕೆ ತರಬೇತಿಯ ಸಮಾರೋಪ ಸಮಾರಂಭ ಭಾರತೀಯ ವಿಕಾಸ ಟ್ರಸ್ಟ್‍ನಲ್ಲಿ ನಡೆಯಿತು.ಸಮಾರೋಪ ಸಮಾರಂಭದ ಮುಖ್ಯ ಅತಿಥಿಯಾಗಿ ಆಗಮಿಸಿದ ಪ್ರಭಾ ಎಚ್.ಎಸ್, ಹಿರಿಯ ವ್ಯವಸ್ಥಾಪಕರು, ಕೆನರಾ ಬ್ಯಾಂಕ್, ಸರ್ಕಲ್ ಆಫೀಸ್, ಮಣಿಪಾಲ ಇವರು ಮಾತನಾಡಿ ವಿದ್ರ್ಯಾಜನೆಗೆ ವಯಸ್ಸು, ಆರ್ಥಿಕ ಸ್ಥಿತಿ ಇವುಗಳಿಗಿಂತ ಮನೋಧರ್ಮವೇ ಮುಖ್ಯವಾಗಿರುತ್ತದೆ. ಇಲ್ಲಿ ಕಲಿತ ಕೌಶಲ್ಯವನ್ನು ಬಳಸಿಕೊಂಡು ಸ್ವ ಉದ್ಯೋಗಿಗಳಾಗಿ ಯಶಸ್ಸನ್ನು ಗಳಿಸಿ ಎಂದು ಶಿಬಿರಾರ್ಥಿಗಳಿಗೆ ಕಿವಿ ಮಾತು ತಿಳಿಸಿದರು.

ವೇದಿಕೆಯಲ್ಲಿ ಭಾರತೀಯ ವಿಕಾಸ ಟ್ರಸ್ಟ್‍ನ ಮಾಸ್ಟರ್ ಟ್ರೈನರ್ ಸುಧೀರ್ ಕುಲಕರ್ಣಿ ಮಾತನಾಡಿ ಭಾರತೀಯ ವಿಕಾಸ ಟ್ರಸ್ಟ್ ಸ್ವ-ಉದ್ಯೋಗಿಗಳಿಗೆ ತರಬೇತಿಯ ನಂತರ ಸ್ವ-ಉದ್ಯೋಗ ಕೈಗೊಳ್ಳಲು ಸಹಾಯವಾಗುವ ಅನೇಕ ಮಾರ್ಗದರ್ಶಿ ಕಾರ್ಯಕ್ರಮಗಳನ್ನು ಆಯೋಜಿಸುತ್ತಿದ್ದು ಶಿಬಿರಾರ್ಥಿಗಳು ಇದರ ಪ್ರಯೋಜ ತಂದುಕೊಳ್ಳಬೇಕು ಎಂದು ತಿಳಿಸಿದರು.

ಮುಖ್ಯ ಕಾರ್ಯಕ್ರಮ ಸಂಯೋಜಕಿ ಲಕ್ಷ್ಮೀ ಬಾಯಿ ಮತ್ತು ಸಂಪನ್ಮೂಲ ವ್ಯಕ್ತಿ ಮುಕ್ತಾ ಶ್ರೀನಿವಾಸ ಭಟ್ ಮುಂತಾದವರು ಉಪಸ್ಥಿತರಿದ್ದರು. ಭಾರತೀಯ ವಿಕಾಸ ಟ್ರಸ್ಟ್‍ನ ಹಿರಿಯ ಸಲಹೆಗಾರ ಶ್ರೀಕಾಂತ್ ಹೊಳ್ಳ ಸ್ವಾಗತಿಸಿದರು ಮತ್ತು ಕಾರ್ಯಕ್ರಮ ಅಧಿಕಾರಿ ಪ್ರತಿಮಾ ವಂದಿಸಿ, ಕಾರ್ಯಕ್ರಮ ನಿರೂಪಿಸಿದರು.

 
 
 
 
 
 
 
 
 
 
 

Leave a Reply