Janardhan Kodavoor/ Team KaravaliXpress
23.6 C
Udupi
Friday, December 2, 2022
Sathyanatha Stores Brahmavara

ಕಂಚಿಕಾನು ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ

ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ,ಕಂಚಿಕಾನು ಇಲ್ಲಿ ಶ್ರೀ ನಾರಾಯಣ ಶಾನುಭಾಗ್ ಉಪ್ರಳ್ಳಿ ಇವರ ಪ್ರಾಯೋಜಕತ್ವದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ಜರಗಿತು.ಕಾರ್ಯಕ್ರಮದಲ್ಲಿ ಶಾಲಾ ವಿದ್ಯಾರ್ಥಿಗಳು ಮತ್ತು ಶಿಕ್ಷಕರಿಂದ ಕನ್ನಡ ಕವಿಗಳು ರಚಿಸಿದ ಗೀತೆಗಳ ಗಾಯನ ನಡೆಯಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್.ಡಿ.ಎಮ್.ಸಿ ಅಧ್ಯಕ್ಷರಾದ ಶ್ರೀ ಪ್ರಭಾಕರ ದೇವಾಡಿಗ ವಹಿಸಿದ್ದರು.ಉಪಾಧ್ಯಕ್ಷೆ ಶ್ರೀಮತಿ ಲಲಿತಾ ಶೇಟ್, ಗ್ರಾಮಪಂಚಾಯತ್ ಸದಸ್ಯರಾದ ಶ್ರೀ ವೀರೇಂದ್ರ ಶೆಟ್ಟಿ, ಹಳೆ ವಿದ್ಯಾರ್ಥಿ ಸಂಘದ ವಿಶ್ವನಾಥ ಆಚಾರ್ಯ,ಚಿತ್ತರಂಜನ್, ಶೀನದೇವಾಡಿಗ,ಸೂರ್ಯ ಪೂಜಾರಿ,ಪ್ರಭಾಕರ ಪೂಜಾರಿ, ರಾಘವೇಂದ್ರ ದೇವಾಡಿಗ,ದುರ್ಗಾ ಯುವಕ ಮಂಡಲದ ಅಧ್ಯಕ್ಷ ಶ್ರೀ ಸಂದೀಪ್ ದೇವಾಡಿಗ, ಮತ್ತು ಎಸ್.ಡಿ.ಎಮ್.ಸಿ ಸದಸ್ಯರು, ಹಳೆ ವಿದ್ಯಾರ್ಥಿಗಳು.ವಿದ್ಯಾರ್ಥಿಗಳು ಉಪಸ್ಥಿತರಿದ್ದರು.ಶಾಲಾ ಮುಖ್ಯ ಶಿಕ್ಷಕರಾದ ಶ್ರೀ ತಿಮ್ಮಪ್ಪ ಗಾಣಿಗ ಪ್ರಾಸ್ತಾವಿಕವಾಗಿ ಮಾತನಾಡಿದರು.ಸಹಶಿಕ್ಷಕಿ ಶ್ರೀಮತಿ ಯಶೋಧಾ ಕನ್ನಡ ರಾಜ್ಯೋತ್ಸವದ ಬಗ್ಗೆ ಮಾತನಾಡಿದರು.ಶ್ರೀಮತಿ ಗೀತಾ ಮೈಯ ಸ್ವಾಗತಿಸಿ, ಶ್ರೀಮತಿ ಶಶಿಕಲಾ ವಂದಿಸಿದರು.ದೈಹಿಕ ಶಿಕ್ಷಕ ಶ್ರೀ ಬಾಲಕೃಷ್ಣ ಹಾಗೂ ಸಹಶಿಕ್ಷಕಿ ಜ್ಯೋತಿ ಕಾರ್ಯಕ್ರಮ ನಿರೂಪಿಸಿದರು.

- Advertisement -

ಸಂಬಂಧಿತ ಸುದ್ದಿ

Leave a Reply

ಛಾಯಾಂಕಣ

ಇತ್ತೀಚಿನ ಸುದ್ದಿ

error: Content is protected !!