ಕಾರು ಡಿಕ್ಕಿ: ಯುವತಿ ಸ್ಥಳದಲ್ಲೇ ಸಾವು

ರಸ್ತೆ ಪಕ್ಕದಲ್ಲಿ ನಡೆದು ಹೋಗುತ್ತಿದ್ದ ಯುವತಿಗೆ ಕಾರು ಬಡಿದು ಯುವತಿ ಸ್ಥಳದಲ್ಲೇ ಮೃತ ಪಟ್ಟ ಘಟನೆ ತಾಲೂಕಿನ ಬಾಳೇಗುಳಿ ಬಳಿ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಸಂಭವಿಸಿದೆ.
ಹುಬ್ಬಳ್ಳಿ ಮೂಲದ ಸಾವಂತ್ರಿ ಗುಜನೂರು ಮೃತ ಯುವತಿಯಾಗಿದ್ದು ಈಕೆ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ಹೋಗುತ್ತಿದ್ದ ಸಂದರ್ಭದಲ್ಲಿ ಕೇರಳದಿಂದ ಗೋವಾಕ್ಕೆ ತೆರಳುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ.
ಅಪಘಾತದ ನಂತರ ನಿಯಂತ್ರಣ ತಪ್ಪಿದ ಕಾರು ರಸ್ತೆ ಪಕ್ಕದಲ್ಲಿ ನಿಲ್ಲಿಸಿದ್ದ ಲಾರಿಗೆ ಡಿಕ್ಕಿ ಹೊಡೆದು ಕಾರಿನಲ್ಲಿದ್ದ ದಂಪತಿ ಸಹ ತೀವ್ರ ಗಾಯಗೊಂಡು ಕಾರವಾರ ಆಸ್ಪತ್ರೆಗೆ ದಾಖಲಿಸಲಾಗಿದೆ. ಕೆಲವು ದಿನಗಳ ಹಿಂದೆ ಹಿಂದೆ ಇದೇ ಸ್ಥಳದಲ್ಲಿ ಅಪಘಾತ ಸಂಭವಿಸಿ ನಾಲ್ಕು ಜನ ಮೃತ ಪಟ್ಟಿದ್ದರು.
 
 
 
 
 
 
 
 
 
 
 

Leave a Reply