ಕಾರ್ಮೆಲ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕೋಟಿ ಕಂಠ ಗಾಯನ ಕಾರ್ಯಕ್ರಮ

ಕಾರ್ಮೆಲ್ ಆಂಗ್ಲ ಮಾಧ್ಯಮ ಶಾಲೆ ಕೆಮ್ಮಣ್ಣು, ಸಂತ ಫಿಲೋಮಿನಾ ಹಿರಿಯ ಪ್ರಾಥಮಿಕ ಶಾಲೆ, ಕಾರ್ಮೆಲ್ ಕನ್ನಡ ಮಾಧ್ಯಮ ಪ್ರೌಢಶಾಲೆ ಕೆಮ್ಮಣ್ಣು, ಇದರ ಜಂಟಿ ಆಶ್ರಯದಲ್ಲಿ ಕಾರ್ಮೆಲ್ ಆಂಗ್ಲ ಮಾಧ್ಯಮ ಶಾಲೆಯ ನೇತೃತ್ವದಲ್ಲಿ ದಿನಾಂಕ 28-10-2022 ರಂದು ಕೋಟಿ ಕಂಠ ಗಾಯನ ಕಾರ್ಯಕ್ರಮ ನೆರವೇರಿತು.

ಕಾರ್ಯಕ್ರಮದಲ್ಲಿ ಶಾಲಾ ಮುಖ್ಯೋಪಾಧ್ಯಾಯನಿ ಯರು, ಶಾಲಾ ಶಿಕ್ಷಕ ಶಿಕ್ಷಕೇತರ ವೃಂದ, ರಕ್ಷಕ ಶಿಕ್ಷಕ ಸಂಘದ ಸದಸ್ಯರು, ಹಾಗೂ ಪೋಷಕರು ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಕುವೆಂಪು ಅವರ ಜಯ ಭಾರತ ಜನನಿಯ ತನುಜಾತೆ, ಚೆನ್ನವೀರಕಣವಿಯವರ ವಿಶ್ವವಿನೂತನ, ಕುವೆಂಪು ಅವರ ಭಾರಿಸು ಕನ್ನಡ ಡಿಂಡಿಮವ, ಡಾ. ಡಿ ಎಸ್ ಕರ್ಕಿಯವರ ಹಚ್ಚೇವು ಕನ್ನಡದ ದೀಪ, ಹುಯಿಲಗೋಳ ನಾರಾಯಣರಾಯರ ಉದಯವಾಗಲಿ ಚೆಲುವ ಕನ್ನಡ ನಾಡು, ಹಂಸಲೇಖರ ಹುಟ್ಟಿದರೆ ಕನ್ನಡ ನಾಡಲಿ ಹುಟ್ಟಬೇಕು ಗೀತೆಗಳನ್ನು ಹಾಡಲಾಯಿತು.

 
 
 
 
 
 
 
 
 
 
 

Leave a Reply