ಕ್ಲೀನ್ ಇಂಡಿಯಾ ಅಭಿಯಾನ- ಸ್ವಚ್ಛ ಭಾರತ್ ಫ್ರೆಂಡ್ಸ್ ತೃತೀಯ

ಭಾರತ ಸರ್ಕಾರ, ನೆಹರು ಯುವ ಕೇಂದ್ರ ಉಡುಪಿ ವತಿಯಿಂದ ಜಿಲ್ಲಾಮಟ್ಟದ ಕ್ಲೀನ್ ಇಂಡಿಯಾ ಕಾರ್ಯಕ್ರಮದಲ್ಲಿ ಸ್ವಚ್ಛ ಭಾರತ್ ಫ್ರೆಂಡ್ಸ್ ತೃತೀಯ ಸ್ಥಾನವನ್ನು ಪಡೆದಿದೆ.

ಇಂದು ಪೂರ್ಣಪ್ರಜ್ಞ ಕಾಲೇಜು ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಪ್ರಶಸ್ತಿ ಪ್ರದಾನ ಮಾಡಿದರು.

ಈ ಸಂದರ್ಭದಲ್ಲಿ ನೆಹರು ಯುವ ಕೇಂದ್ರ ಜಿಲ್ಲಾ ಯುವ ಅಧಿಕಾರಿ ವಿಲ್ಫ್ರೆಡ್ ಡಿಸೋಜ, ಸ್ವಚ್ಛ ಭಾರತ್ ಫ್ರೆಂಡ್ಸ್ ಸದಸ್ಯರಾದ ಜಗದೀಶ್ ಶೆಟ್ಟಿ, ರಾಘವೇಂದ್ರ ಪ್ರಭು ಕರ್ವಾಲು, ಉದಯ ನಾಯ್ಕ್, ಜ್ಯೋತಿ, ಡಾ. ವಿಜಯ್ ನೆಗಳೂರು, ರಫೀಕ್ ಖಾನ್, ರಕ್ಷಿತ್ ಕುಮಾರ್ ವಂಡ್ಸೆ ಉಪಸ್ಥಿತರಿದ್ದರು.

 
 
 
 
 
 
 
 
 
 
 

Leave a Reply