ಮೂರು ದಿನಗಳಲ್ಲಿ ಸಂಪುಟ ವಿಸ್ತರಣೆ :ಸಿಎಂ ಯಡಿಯೂರಪ್ಪ

ಬೆಂಗಳೂರು: ಇಂದು ಶಿರಾ ಹಾಗೂ ರಾಜರಾಜೇಶ್ವರಿ ನಗರದಲ್ಲಿ ಜಯಭೇರಿ ಭಾರಿಸಿದ ಬಿಜೆಪಿಗೆ ಮತ್ತು ಸಚಿವ ಸ್ಥಾನ ಆಕಾಂಕ್ಷಿಗಳಿಗೆ ಬಿಎಸ್ ಯಡಿಯೂರಪ್ಪ ಇನ್ನೊಂದು ವಿಶೇಷ ಉಡುಗೊರೆ ನೀಡಿದ್ದಾರೆ. ಸಚಿವ ಸ್ಥಾನ ಆಕಾಂಕ್ಷಿಗಳ ಕುರಿತು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಮಾತನಾಡಿ, ಇನ್ನೂ ಎರಡು ಮೂರು ದಿನಗಳಲ್ಲಿಯೇ ಸಂಪುಟ ವಿಸ್ತರಣೆ ಮಾಡುವುದಾಗಿ ತಿಳಿಸಿದ್ದಾರೆ.

ಉಪ ಚುನಾವಣೆಯ ಗೆಲುವಿನ ಕುರಿತು ಪ್ರತಿಕ್ರಿಯಿಸಿದ ಸಿಎಂ ಬಿಎಸ್ , ನಾವು ಉಪ ಚುನಾವಣೆಯಲ್ಲಿ ಜನರಿಗೆ ಕೊಟ್ಟಿರುವಂತ ಭರವಸೆಯನ್ನು ಈಡೇರಿಸುತ್ತೇವೆ. 2 ವರ್ಷಗಳಲ್ಲಿ ಕ್ಷೇತ್ರದ ಅಭಿವೃದ್ಧಿ ಕೆಲಸಗಳನ್ನು ಮಾಡಿಯೇ ಮಾಡುತ್ತೇವೆ. ಉಪ ಚುನಾವಣೆಯಲ್ಲಿ ಬಿಜೆಪಿಯ ಅಭ್ಯರ್ಥಿಗಳನ್ನು ಗೆಲ್ಲಿಸಿದಂತ ಮತದಾರರಿಗೆ ಧನ್ಯವಾದ ಹೇಳಿದ್ದಾರೆ.

ತದನಂತರ ಮಾತನಾಡಿದ ಅವರು, ನಾಳೆ ಅಥವಾ ನಾಡಿದ್ದು ಬಿಜೆಪಿ ವರಿಷ್ಠರನ್ನು ಭೇಟಿಯಾಗಲಿದ್ದೇನೆ. ಬಿಜೆಪಿ ಹೈಕಮಾಂಡ್ ಭೇಟಿಯ ಬಳಿಕ, 2-3 ದಿನಗಳಲ್ಲಿ ಸಚಿವ ಸಂಪುಟವನ್ನು ವಿಸ್ತರಣೆ ಮಾಡಲಾಗುತ್ತದೆ ಎಂಬ ಮಾಹಿತಿ ನೀಡಿದ್ದಾರೆ.

 
 
 
 
 
 
 
 
 

Leave a Reply