ರಾಜ್ಯದಲ್ಲಿ ನೆರೆ ಸಂಬಂಧಿತ ಪರಿಹಾರ ಕಾರ್ಯಾಚರಣೆಗೆ ರಾಜ್ಯ ಸರಕಾರದಿಂದ 500 ಕೋಟಿ ರೂಪಾಯಿ ಬಿಡುಗಡೆ

ಉಡುಪಿ: ರಾಜ್ಯದಲ್ಲಿ ಪ್ರವಾಹದಿಂದ ಇದುವರೆಗೆ 32 ಮಂದಿ ಮೃತಪಟ್ಟಿದ್ದಾರೆ. ಉಡುಪಿಯಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಈ ಮಾಹಿತಿ ನೀಡಿದ್ದಾರೆ. ರಾಜ್ಯದಲ್ಲಿ ನೆರೆ ಸಂಬಂಧಿತ ಪರಿಹಾರ ಕಾರ್ಯಾಚರಣೆಗೆ ರಾಜ್ಯ ಸರ್ಕಾರ 500 ಕೋಟಿ ರೂಪಾಯಿ ಬಿಡುಗಡೆ ಮಾಡಲಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಜಿಲ್ಲಾಧಿಕಾರಿಗಳ ಖಾತೆಯಲ್ಲಿ ಹಣ ಇದೆ. ಇದನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು ಎಂದು ಸಿಎಂ ಸೂಚಿಸಿದ್ದಾರೆ.

ಕರಾವಳಿಯ ಮೂರು ಜಿಲ್ಲೆಗಳಲ್ಲಿ ವಾಡಿಕೆಗಿಂತ ಹೆಚ್ಚಿನ ಮಳೆ ಸುರಿದಿದೆ. ಇದರಿಂದ ಸಮಸ್ಯೆ ಸೃಷ್ಟಿಯಾಗಿದೆ. ರಸ್ತೆ ಮತ್ತು ಸೇತುವೆಗಳಿಗೆ ಹಾನಿಯಾಗಿದ್ದು ಸಮರೋಪಾದಿಯಲ್ಲಿ  ದುರಸ್ತಿ ಕಾರ್ಯ ನಡೆಸುವಂತೆ ಆದೇಶ ನೀಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.

ಈ ಮಧ್ಯೆ ಉತ್ತರ ಕನ್ನಡ ಜಿಲ್ಲೆಯ ಪ್ರವಾಸವನ್ನು ಅನಿವಾರ್ಯ ಕಾರಣಗಳಿಂದ ಸಿಎಂ ರದ್ದುಪಡಿಸಿದ್ದಾರೆ.

 
 
 
 
 
 
 
 
 
 
 

Leave a Reply