Janardhan Kodavoor/ Team KaravaliXpress
30.6 C
Udupi
Sunday, October 2, 2022
Sathyanatha Stores Brahmavara

ಶ್ರೀಕೃಷ್ಣಮಠಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಭೇಟಿ

ಶ್ರೀಕೃಷ್ಣಮಠಕ್ಕೆ,ಕರ್ನಾಟಕ ರಾಜ್ಯ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿಯವರು ಭೇಟಿ ನೀಡಿದ ಸಂದರ್ಭದಲ್ಲಿ,ಪರ್ಯಾಯ ಮಠದ ದಿವಾನರಾದ ವರದರಾಜ ಭಟ್ ಮಾಲಾರ್ಪಣೆ ಮಾಡಿ ಸ್ವಾಗತಿಸಿದರು.

ಮುಖ್ಯಮಂತ್ರಿಗಳು ದೇವರ ದರ್ಶನ ಪಡೆದು, ಗುರುಪೂರ್ಣಿಮೆ ಪ್ರಯುಕ್ತ, ಪರ್ಯಾಯ ಕೃಷ್ಣಾಪುರ ಮಠಾಧೀಶರಾದ ಶ್ರೀವಿದ್ಯಾಸಾಗರತೀರ್ಥ ಶ್ರೀಪಾದರಿಗೆ ಹಾರ , ಫಲವಸ್ತು , ಕಾಲುದೀಪ , ಗುರು ಕಾಣಿಕೆ ಹಾಗೂ ಕಾಷಾಯ ವಸನವಿತ್ತು ಮಂಗಳಾರತಿ ವೆಳಗಿ ಗುರುವಂದನೆ ಸಲ್ಲಿಸಿದರು.ಪರ್ಯಾಯ ಶ್ರೀಪಾದರು ಅವರನ್ನು ಸ್ಮರಣಿಕೆ ಹಾಗೂ ಶ್ರೀಕೃಷ್ಣನ ಪ್ರಸಾದ ನೀಡಿ ಸನ್ಮಾನಿಸಿದರು.ಈ ಸಂದರ್ಭದಲ್ಲಿ ಸಚಿವರುಗಳಾದ ಆರ್.ಅಶೋಕ್, ಅಂಗಾರ,ಕೋಟ ಶ್ರೀನಿವಾಸ ಪೂಜಾರಿ,ಉಡುಪಿ ಶಾಸಕರಾದ ಕೆ.ರಘುಪತಿ ಭಟ್,ಬೈಂದೂರು ಶಾಸಕರಾದ ಸುಕುಮಾರ್ ಶೆಟ್ಟಿ ,ಕರಾವಳಿ ಪ್ರಾಧಿಕಾರದ ಮಟ್ಟಾರ್ ರತ್ನಾಕರ ಹೆಗ್ಡೆ,ಬಿ.ಜೆ.ಪಿ.ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ ನಾಯಕ್,ಬಿ.ಜೆ.ಪಿ ಯ ಉದಯಕುಮಾರ ಶೆಟ್ಟಿ , ಜಿಲ್ಲಾಧಿಕಾರಿಗಳು ಮೊದಲಾದವರು ಉಪಸ್ಥಿತರಿದ್ದು ಶ್ರೀಪಾದರಿಗೆ ಗುರುವಂದನೆ ಸಲ್ಲಿಸಿದರು. ಪರ್ಯಾಯ ಮಠದ ದಿವಾನರಾದ ವರದರಾಜ ಭಟ್ , ಪಾರುಪತ್ಯಗಾರರಾದ ಶ್ರೀನಿವಾಸ ಉಪಾಧ್ಯಾಯ ಹಾಗೂ ಪರ್ಯಾಯ ಸ್ವಾಗತ ಸಮಿತಿಯ ಪ್ರಧಾನ ಕಾರ್ಯದರ್ಶಿ ವಿಷ್ಣುಪ್ರಸಾದ್ ಪಾಡಿಗಾರ್,ವಾಸುದೇವ ಪೆರಂಪಳ್ಳಿ ಮೊದಲಾದವರು ಉಪಸ್ಥಿತರಿದ್ದು ಸಹಕರಿಸಿದರು.

- Advertisement -

ಸಂಬಂಧಿತ ಸುದ್ದಿ

Leave a Reply

ಛಾಯಾಂಕಣ

ಇತ್ತೀಚಿನ ಸುದ್ದಿ

error: Content is protected !!