ಉಡುಪಿ: ಕೃಷ್ಣನಗರಿ ಉಡುಪಿಯಲ್ಲಿ ಕೋವಿಡ್-19 ಸೋಂಕಿತರ ಸಂಖ್ಯೆ ಪ್ರತಿದಿನವೂ ಹೆಚ್ಚುತ್ತಿದೆ. ಜಿಲ್ಲೆಯಲ್ಲಿ ಇಂದು ಮತ್ತೆ 136 ಜನರಿಗೆ ಸೋಂಕು ತಾಗಿರುವುದು ದೃಢವಾಗಿದೆ. ಜಿಲ್ಲೆಯ ಒಟ್ಟು ಸೋಂಕಿತರ ಸಂಖ್ಯೆ 4492ಕ್ಕೆ ಏರಿಕೆಯಾಗಿದೆ.
ಜಿಲ್ಲೆಯಲ್ಲಿ ಇದುವರೆಗೆ ಒಟ್ಟು 32,401 ಜನರ ಗಂಟಲು ದ್ರವ ಮಾದರಿ ಸಂಗ್ರಹಿಸಲಾಗಿದೆ. ಅದರಲ್ಲಿ 27,463 ಫಲಿತಾಂಶ ನೆಗೆಟಿವ್ ಆಗಿದೆ. 4492 ವರದಿಗಳು ಪಾಸಿಟವ್. ಇನ್ನೂ 446 ಗಂಟಲು ದ್ರವ ಮಾದರಿಯ ಪರೀಕ್ಷಾ ವರದಿ ಬಾಕಿಯಿದೆ.







