ಕೋವಿಡ್-19 ನಿರ್ಮೂಲ ನೆಗಾಗಿ ಜಿಲ್ಲಾ ಬಿಜೆಪಿಯಿಂದ ಅನಂತೇಶ್ವರ ದೇವಳದಲ್ಲಿ ವಿಶೇಷ ಪೂಜೆ

ಉಡುಪಿ: ವಿಶ್ವದಾದ್ಯಂತ ಹರಡಿರುವ ಕೋವಿಡ್-19 ವ್ಯಾಧಿ ನಿರ್ಮೂಲನೆಗಾಗಿ ಪ್ರಾರ್ಥಿಸಿ ಉಡುಪಿಯ ಶ್ರೀ ಅನಂತೇಶ್ವರ ದೇವಳದಲ್ಲಿ ಉಡುಪಿ ಜಿಲ್ಲಾ ಬಿಜೆಪಿಯಿಂದ ಪ್ರಾರ್ಥನೆ ಸಲ್ಲಿಸಲಾಯಿತು.

ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಮತ್ತು ಕರಾವಳಿ ಅಭಿ ವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ ಅವರು ವಿಶೇಷ ಪೂಜೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ವಕ್ತಾರ ಗುರುಪ್ರಸಾದ್ ಶೆಟ್ಟಿ ಕಟಪಾಡಿ, ಜಿಲ್ಲಾ ಸಹ ವಕ್ತಾರರಾದ ಶಿವಕುಮಾರ್ ಅಂಬಲಪಾಡಿ ಮತ್ತು ಗಿರೀಶ್ ಎಂ. ಅಂಚನ್ ಉಪಸ್ಥಿತರಿದ್ದರು.

 
 
 
 
 
 
 

Leave a Reply