ಕೋವಿಡ್-19: ಉಡುಪಿಯಲ್ಲಿಂದು ಸಾವಿರ ನೆಗೆಟಿವ್

ಕೋವಿಡ್-19 ಸಂಬಂಧಿಸಿದಂತೆ ಉಡುಪಿ ಜಿಲ್ಲೆಯಲ್ಲಿ ಇಂದು 1000 ಮಂದಿಗೆ ನೆಗೆಟಿವ್ ಬಂದಿದೆ ಮತ್ತು 258 ಹೊಸ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಉಡುಪಿ ತಾಲೂಕಿನಲ್ಲಿ 162, ಕುಂದಾಪುರ 39, ಕಾರ್ಕಳ 41 ಮತ್ತು ಹೊರ ಜಿಲ್ಲೆಗೆ ಸಂಬಂಧಿಸಿದಂತೆ 16 ಪಾಸಿಟಿವ್ ಪ್ರಕರಣ ಪತ್ತೆಯಾಗಿವೆ. ಜಿಲ್ಲೆಯಲ್ಲಿ ಇಂದು 218 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ಜಿಲ್ಲೆಯಲ್ಲಿಂದು ಕೋವಿಡ್-19 ಸಂಬಂಧಿಸಿದಂತೆ ಓರ್ವರು ಮೃತಪಟ್ಟಿದ್ದಾರೆ. ಇಲ್ಲಿಯವರೆಗೆ ಉಡುಪಿಯಲ್ಲಿ 11,342 ಮಂದಿ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ ಒಟ್ಟು 1884 ಸಕ್ರಿಯ ಪ್ರಕರಣಗಳು ಉಳಿದಿವೆ.

 
 
 
 
 
 
 
 
 
 
 

Leave a Reply