ಕಟಪಾಡಿ: ಬೈಕ್ ಗೆ ಬಸ್ ಡಿಕ್ಕಿ; ಹೂವಿನ ವ್ಯಾಪಾರಿ ಸ್ಥಳದಲ್ಲೇ ಸಾವು!

ರಾಷ್ಟೀಯ ಹೆದ್ದಾರಿ 66ರ ಪೂರ್ವ ಭಾಗದ ಸರ್ವಿಸ್ ರಸ್ತೆಯಲ್ಲಿ ಬಸ್ ಹಾಗೂ ಬೈಕ್ ಮಧ್ಯೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರ ಸ್ಥಳದಲ್ಲೇ  ಸಾವನ್ನಪ್ಪಿರುವ ಘಟನೆ ಕಟಪಾಡಿಯಲ್ಲಿ ನಡೆದಿದೆ.

ಹೂವಿನ ವ್ಯಾಪಾರವನ್ನು ಮಾಡುತ್ತಿದ್ದ ಕಟಪಾಡಿ ಸರಕಾರಿ ಗುಡ್ಡೆ ನಿವಾಸಿ ಇಕ್ಬಾಲ್ (32) ಮೃತಪಟ್ಟವರು ಎಂದು ಗುರುತಿಸಲಾಗಿದೆ.

ಖಾಸಗಿ ಬಸ್‌ ಉಡುಪಿಯಿಂದ ಮಂಗಳೂರು ಕಡೆ ಹೋಗುತ್ತಿದ್ದು, ಈ ವೇಳೆ ಬೈಕ್ ಹಾಗೂ ಬಸ್ ನಡುವೆ ಅಪಘಾತ ಸಂಭವಿಸಿದೆ.

ಮೃತದೇಹವನ್ನು ಸಾರ್ವಜನಿಕರ ಸಹಕಾರದಿಂದ ಆಸ್ಪತ್ರೆಗೆ ಸಾಗಿಸಲಾಗಿದೆ.ಕಾಪು ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

 
 
 
 
 
 
 
 
 
 
 

Leave a Reply