ಮಣಿಪಾಲ ಕಾರು ಪಲ್ಟಿ; ವೈದ್ಯ ಸಾವು

ಮಣಿಪಾಲ: ರಜಾತಾದ್ರಿಯ ಜಿಲ್ಲಾಧಿಕಾರಿ ಕಚೇರಿ ರಸ್ತೆಯಲ್ಲಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದ ಪರಿಣಾಮ ಚಾಲಕ, ವೈದ್ಯ ಸ್ಥಳದಲ್ಲೇ ಮೃತಪಟ್ಟ ಘಟನೆ ಶುಕ್ರವಾರ ತಡರಾತ್ರಿ ನಡೆದಿದೆ.

ಮೃತರನ್ನು ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯ ಮೂಳೆ ತಜ್ಞ ಡಾ. ಸೂರ್ಯನಾರಾಯಣನ್ (ಡಾ. ಸೂರಿ) ಎಂದು ಗುರುತಿಸಲಾಗಿದೆ.

ಹೋಟೆಲ್ ಹಾಟ್ ಆ್ಯಂಡ್ ಸ್ಪೈಸಿ ಎದುರುಗಡೆ ಕಡಿದಾದ ತಿರುವಿನಲ್ಲಿ ನಿಯಂತ್ರಣ ತಪ್ಪಿದ ಕಾರು ಮೊದಲು ರಸ್ತೆ ವಿಭಾಜಕಕ್ಕೆ ಢಿಕ್ಕಿ ಹೊಡೆದು ನಂತರ 3 ಪಲ್ಟಿಯಾಗಿದ್ದು, ಡಾ. ಸೂರ್ಯನಾರಾಯಣನ್ ತಲೆಗೆ ತೀವ್ರ ಪೆಟ್ಟಾಗಿ ಅವರು ಸ್ಥಳದಲ್ಲಿ ಮೃತಪಟ್ಟಿದ್ದಾರೆ.

ಮಣಿಪಾಲ ಠಾಣೆಯಲ್ಲಿ ಕೇಸು ದಾಖಲಾಗಿದೆ.

 
 
 
 
 
 
 
 
 
 
 

Leave a Reply