ಟಿಪ್ಪರ್-ಬೈಕ್ ನಡುವೆ ಭೀಕರ ಅಪಘಾತ; ಶಿಕ್ಷಕಿ ಸಾವು!

ಟಿಪ್ಪರ್ ಹಾಗೂ ದ್ವಿಚಕ್ರ ವಾಹನದ ನಡುವೆ ಡಿಕ್ಕಿಯಾಗಿ ಶಾಲಾ ಶಿಕ್ಷಕಿಯೊಬ್ಬರು ಸಾವನಪ್ಪಿದ ಘಟನೆ ಪುತ್ತೂರಿನ ಕಬಕ ಬಳಿಯ ಪೋಳ್ಯದಲ್ಲಿ ನಡೆದಿದೆ.

ಬಂಟ್ವಾಳ ತಾಲೂಕು ಇಡ್ಕಿದು ಗ್ರಾಮದ ಮಿತ್ತೂರು ಮದಕ ಸುರೇಶ್ ಕುಲಾಲ್‌ ಎಂಬವರ ಪತ್ನಿ ಅನಿತಾ(35) ಮೃತರು. ಇವರು ಖಾಸಗಿ ಶಾಲೆಯೊಂದರಲ್ಲಿ ಶಿಕ್ಷಕಿಯಾಗಿದ್ದು ಕೆಲವು ದಿನಗಳ ಹಿಂದೆ ಮನೆಯಲ್ಲಿ ಬಿದ್ದು ಗಾಯಗೊಂಡಿದ್ದರು. ಸೋಮವಾರ ಬೆಳಗ್ಗೆ ಪುತ್ತೂರು ಸರಕಾರಿ ಆಸ್ಪತ್ರೆಗೆ ಚಿಕಿತ್ಸೆಗೆಂದು ಬಂದಿದ್ದರು. ಚಿಕಿತ್ಸೆ ಪಡೆದು ಬೈಕ್‌ನಲ್ಲಿ ಹಿಂತಿರುಗುತ್ತಿದ್ದಾಗ ಕಬಕ ಸಮೀಪದ ಪೋಳ್ಯ ಎಂಬಲ್ಲಿ ಏಕಾಏಕಿ ಬಂದ ಟಿಪ್ಪರ್ ಲಾರಿ ಡಿಕ್ಕಿಯಾಗಿದೆ. 

ಡಿಕ್ಕಿಯ ರಭಸಕ್ಕೆ ಹಿಂಬದಿ ಸವಾರೆಯಾಗಿದ್ದ ಅನಿತಾ ಹಾಗೂ ಅವರು ಮಗು ರಸ್ತೆಗೆ ಎಸೆಯಲ್ಪಟ್ಟು ತೀವ್ರ ಗಾಯಗೊಂಡಿದ್ದರು. ಕೂಡಲೇ ಅವರನ್ನು ಬೊಳುವಾರು ಮಹಾವೀರ ಆಸ್ಪತ್ರೆಗೆ ಕರೆ ತರಲಾಗಿದ್ದರೂ ಆಸ್ಪತ್ರೆ ತಲುಪುವಷ್ಟರಲ್ಲಿ ಅವರು ಮೃತಪಟ್ಟಿದ್ದರು. ಮಗುವಿನ ಭುಜದ ಭಾಗಕ್ಕೆ ಮತ್ತು ಪತಿ ಸುರೇಶ್ ಕುಲಾಲ್ ಸಣ್ಣ ಪುಟ್ಟ ಗಾಯಗಳಿಂದ ಅಪಾಯದಿಂದ ಪಾರಾಗಿದ್ದಾರೆ. ಪುತ್ತೂರು ನಗರ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 
 
 
 
 
 
 
 
 
 
 

Leave a Reply