ಅಂಬಲಪಾಡಿ : ಕಾರು-ಮೀನಿನ ಲಾರಿ ಮುಖಾಮುಖಿ ಢಿಕ್ಕಿ

ಅಂಬಲಪಾಡಿ ಬಳಿ ಕಾರು ಮತ್ತು ಮೀನಿನ ಲಾರಿ ಮುಖಾಮುಖಿ ಢಿಕ್ಕಿಯಾದ ಘಟನೆ ಬುಧವಾರ ನಡೆದಿದೆ.

ಮೀನಿನ ಟ್ರಕ್ ಕೇರಳದ ಕಡೆಗೆ ಹೋಗುತ್ತಿದ್ದ ವೇಳೆ ಅಂಬಲಪಾಡಿ ಸರ್ವಿಸ್ ರಸ್ತೆಯಿಂದ ಹೆದ್ದಾರಿ ಪ್ರವೇಶಿಸಿದ ಮತ್ತೊಂದು ವಾಹನಕ್ಕೆ ಢಿಕ್ಕಿಯಾಗುವುದನ್ನು ತಪ್ಪಿಸಲು ಟ್ರಕ್ ಚಾಲಕ ಪ್ರಯತ್ನಿಸಿದ್ದಾನೆ. ಈ ವೇಳೆ ನಿಯಂತ್ರಣ ತಪ್ಪಿದ ಟ್ರಕ್ ಡಿವೈಡರ್ ದಾಟಿ ಎದುರಿನಿಂದ ಬರುತ್ತಿದ್ದ ಕಾರಿಗೆ ಢಿಕ್ಕಿ ಹೊಡೆದು ಪಲ್ಟಿಯಾಗಿದೆ.

ಅವಘಡದಿಂದ ಕಾರಿನಲ್ಲಿದ್ದವರಿಗೆ ಗಾಯಗಳಾಗಿದ್ದು, ಕೂಡಲೇ ಅವರನ್ನು ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಪಘಾತ ಸ್ಥಳದಲ್ಲಿ ಹೆಚ್ಚಿನ ಅಡೆತಡೆಯಾಗದಂತೆ ಟ್ರಕ್‌ನಿಂದ ಮೀನುಗಳನ್ನು ಮತ್ತೊಂದು ವಾಹನಕ್ಕೆ ವರ್ಗಾಯಿಸಲಾಯಿತು. ಉಡುಪಿ ಸಂಚಾರಿ ಪೊಲೀಸರು ಸ್ಥಳಕ್ಕೆ ಆಗಮಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

 
 
 
 
 
 
 
 
 
 
 

Leave a Reply