ಅಂಬಾಗಿಲು : ನಿಯಂತ್ರಣ ತಪ್ಪಿ ಕಾರು ಪಲ್ಟಿ; ನಾಲ್ವರಿಗೆ ಗಾಯ

ಭಟ್ಕಳದಿಂದ ಮಂಗಳೂರಿನತ್ತ ಅತೀ ವೇಗದಿಂದ ತೆರಳುತ್ತಿದ್ದ ಕಾರು ಅಂಬಾಗಿಲು ಮೀನು ಮಾರುಕಟ್ಟೆ ಬಳಿ ಪಲ್ಟಿಯಾಗಿ ಬಿದ್ದ ಘಟನೆ ಜೂ.13ರ ಗುರುವಾರ ತಡರಾತ್ರಿ ನಡೆದಿದೆ.

ಕಾರು ಅಂಬಾಗಿಲು ಸಮೀಪ ಆಗಮಿಸಿದಾಗ ಚಾಲಕನ ನಿಯಂತ್ರಣ ತಪ್ಪಿದ ಕಾರಣ ಈ ಘಟನೆ ನಡೆದಿದೆ ಎನ್ನಲಾಗಿದೆ. ಕಾರಿನಲ್ಲಿದ್ದ ನಾಲ್ವರು ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ.

ಅಪಘಾತದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ರಸ್ತೆಯಲ್ಲಿ ಕಾರಿನ ಬಿಡಿಭಾಗಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದು ಅಪಘಾತದ ಭೀಕರತೆಗೆ ಸಾಕ್ಷಿಯಾಗಿವೆ. ಇನ್ನು, ಕಾರಿನ ಇಂಜಿನ್ ಬೇರ್ಪಟ್ಟು ಮಾರುದ್ದ ಹೋಗಿ ಬಿದ್ದಿದೆ. 

ಸದ್ಯಕ್ಕೆ ದೂರು ದಾಖಲಾಗಿಲ್ಲ. ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

 
 
 
 
 
 
 
 
 
 
 

Leave a Reply