ನಿಟ್ಟೂರು : ಶೋರೂಂಗೆ ಕೊಂಡೊಯ್ಯುತ್ತಿದ್ದ ಹೊಸ ಫಾರ್ಚೂನರ್ ಕಾರು ಬಸ್ ಗೆ ಡಿಕ್ಕಿ!

ಉಡುಪಿ: ಕುಂದಾಪುರ ಶೋರೂಂನಿಂದ ಮಂಗಳೂರು ಶೋರೂಂನತ್ತ ಹೊಸ ಫಾರ್ಚೂನರ್ ಕಾರನ್ನು ಕೊಂಡೊಯ್ಯುತ್ತಿದ್ದಾಗ ಕಾರು ಚಾಲಕ ನಿಲ್ಲಿಸಿದ ಬಸ್ ಗೆ ಡಿಕ್ಕಿ ಹೊಡೆದ ಘಟನೆ ಉಡುಪಿಯ ನಿಟ್ಟೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಗುರುವಾರ ಸಂಭವಿಸಿದೆ.

ಢಿಕ್ಕಿ ಹೊಡೆದ ರಭಸಕ್ಕೆ ಹೊಚ್ಚ ಹೊಸ ಫಾರ್ಚೂನ‌ರ್ ಕಾರು ನಜ್ಜುಗುಜ್ಜಾಗಿದೆ. ಕಾರನ್ನು ಕುಂದಾಪುರ ಶೋರೂಂ ನಿಂದ ಮಂಗಳೂರು ಶೋರೂಂ ಗೆ ಚಾಲಕ ಕೊಂಡೊಯ್ಯುತ್ತಿದ್ದ. ಉಡುಪಿ ಸಮೀಪದ ನಿಟ್ಟೂರು ಬಳಿ ಹೋಗುತ್ತಿದ್ದಂತೆ ಕಾರು ಚಾಲಕನ ನಿರ್ಲಕ್ಷ್ಯದಿಂದ ರಸ್ತೆ ಬದಿ ಪ್ರಯಾಣಿಕರನ್ನು ಹತ್ತಿಸಲು ನಿಲ್ಲಿಸಿದ್ದ ಬಸ್ ಗೆ ಢಿಕ್ಕಿ ಹೊಡೆದಿದೆ.

ಘಟನೆ ಬಳಿಕ ಕೆಲಹೊತ್ತು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ಅಸ್ತವ್ಯಸ್ತಗೊಂಡಿತು. ವಿಷಯ ತಿಳಿದು ಕಾರು ಶೋರೂಂ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿದರು.

 
 
 
 
 
 
 
 
 
 
 

Leave a Reply