ಲಾರಿ-ಸ್ಕೂಟರ್ ಡಿಕ್ಕಿ; ದಂಪತಿ ಸಾವು, ಮಕ್ಕಳಿಬ್ಬರು ಪಾರು!

 ದ್ವಿಚಕ್ರ ವಾಹನಕ್ಕೆ ಲಾರಿ ಬಂದು ಢಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನ ಸವಾರ ಸೇರಿ ಇಬ್ಬರು ಮೃತಪಟ್ಟಿದ್ದಾರೆ. ಅದರಲ್ಲಿ ಮಕ್ಕಳಿಬ್ಬರು ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ ರಸ್ತೆ ತೊಕ್ಕೊಟ್ಟುವಿನ ಕಲ್ಲಾಪು ಗ್ಲೋಬಲ್‌ ಮಾರ್ಕೆಟ್ ಬಳಿ ಇಂದು ಸಂಭವಿಸಿದೆ.
ಸಾವನ್ನಪ್ಪಿದವರು ಜಪ್ಪಿನಮೊಗರು ನಿವಾಸಿ, ದ್ವಿಚಕ್ರ ವಾಹನ ಸವಾರ ಗಂಗಾಧರ್, ಮಹಿಳ ನೇತ್ರಾವತಿ ಎಂದು ತಿಳಿದು ಬಂದಿದೆ. ಮಕ್ಕಳಾದ ಜ್ಞಾನೇಶ್, ಮೋಕ್ಷಾ ಗಾಯಗೊಂಡಿದ್ದಾರೆ ಎನ್ನಲಾಗಿದೆ.
ಗಂಗಾಧರ್, ಪತ್ನಿ ಮಕ್ಕಳೊಂದಿಗೆ ಪಂಪ್ ವೆಲ್ ನಿಂದ ತೊಕ್ಕೊಟ್ಟು ಕಡೆಗೆ ರಾಷ್ಟ್ರೀಯ ಹೆದ್ದಾರಿ ರಸ್ತೆಯಲ್ಲಿ ಹೋಗುತ್ತಿದ್ದ ಸಂದರ್ಭ ಕಲ್ಲಾಪು ಗ್ಲೋಬಲ್ ಮಾರ್ಕೆಟ್ ಬಳಿ ಲಾರಿ ಢಿಕ್ಕಿ ಹೊಡೆದಿದ್ದು, ಗಂಗಾಧರ್‌ ಹಾಗೂ ಪತ್ನಿ ಗಂಭೀರ ಗಾಯಗೊಂಡು ಮೃತಪಟ್ಟಿದ್ದು, ಮಕ್ಕಳಿಬ್ಬರೂ ಗಾಯಗೊಂಡು ಖಾಸಗಿ ಆಸ್ಟತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಲಾರಿ ಚಾಲಕನ ನಿರ್ಲಕ್ಷ್ಯತನದಿಂದಾಗಿ ಈ ಘಟನೆ ನಡೆದಿದೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.
ಈ ಘಟನೆ ಸ್ಥಳಕ್ಕೆ ಟ್ರಾಫಿಕ್ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.ಪೊಲೀಸರು ಅಪಘಾತ ಪ್ರಕರಣವನ್ನು ವಿಚಾರಣೆ ನಡೆಸುತ್ತಿದ್ದಾರೆ.

Leave a Reply