ಕಾರ್ಕಳದಲ್ಲಿ ಭೀಕರ ಅಪಘಾತ; ಮಗು ಸೇರಿ ಮೂವರು ಸಾವು!

ಖಾಸಗಿ ಬಸ್ ಹಾಗೂ ಕಾರು ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಮಗು
ಸೇರಿದಂತೆ ಮೂವರು ಸಾವನ್ನಪ್ಪಿರುವ ಘಟನೆ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ವೇಣೂರು ಧರ್ಮಸ್ಥಳ ಹಾಗೂ ಸುಬ್ರಹ್ಮಣ್ಯ ಹೆದ್ದಾರಿಯ ನೆಲ್ಲಿಕಾರು ಎಂಬಲ್ಲಿ ನಡೆದಿದೆ.
ನಾಗರಾಜ್, ಪ್ರತ್ಯುಷಾ ಹಾಗೂ ಎರಡು ವರ್ಷದ ಮಗು ಸಾವನ್ನಪ್ಪಿದ ದುರ್ದೈವಿಗಳು. ಮೃತಪಟ್ಟವರು ಆಂಧ್ರಪ್ರದೇಶ ಮೂಲದವರು ಎಂದು ತಿಳಿದು ಬಂದಿದೆ. ಗಂಡ, ಹೆಂಡತಿ ಹಾಗೂ ಮಗು ಸಾವನ್ನಪ್ಪಿದೆ. ಧರ್ಮಸ್ಥಳದಲ್ಲಿ ಮಂಜುನಾಥ ದೇವರ
ದರ್ಶನ ಪಡೆದು ಇಂದು ಬೆಳಗ್ಗೆ 7 ಗಂಟೆ ಸುಮಾರಿಗೆ ಶೃಂಗೇರಿಗೆ ತೆರಳುತ್ತಿದ್ದ ವೇಳೆಯಲ್ಲಿ ಈ ದುರಂತ ಸಂಭವಿಸಿದೆ. ಕಾರ್ಕಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

 
 
 
 
 
 
 
 
 
 
 

Leave a Reply