ಉಡುಪಿ: ಜೀಪ್ ಡಿಕ್ಕಿ; ರಸ್ತೆ ದಾಟುತ್ತಿದ್ದ ಮಹಿಳೆ ಸಾವು

ಬುಲೆರೋ ಡಿಕ್ಕಿಯಾಗಿ ರಸ್ತೆ ದಾಟಲು ನಿಂತಿದ್ದ ಮಹಿಳೆಯೊಬ್ಬರು ಮೃತಪಟ್ಟ ಘಟನೆ ಇಂದು ಉಪ್ಪೂರು ಗ್ರಾಮದ ಕೆ.ಜಿ.ರೋಡ್‌ನ ರಾ.ಹೆ-66ರಲ್ಲಿ ನಡೆದಿದೆ.ಜಯಲಕ್ಷ್ಮೀ ಭಟ್ ಮೃತ ದುರ್ದೈವಿ.

ಜಯಲಕ್ಷ್ಮೀ ಭಟ್ ನಿನ್ನೆ ಬೆಳಗ್ಗೆ 11.30ರ ಸುಮಾರಿಗೆ ಕೆ.ಜಿ.ರೋಡ್ ಪೇಟೆ ಕಡೆಯಿಂದ ಬಂದು ಬ್ರಹ್ಮಾವರ ಕಡೆ ಹೋಗುವ ಬಸ್ ನಿಲ್ದಾಣದತ್ತ ಹೋಗಲು ರಸ್ತೆಯ ಅಂಚಿನಲ್ಲಿ ನಿಂತಿದ್ದರು. ಈ ವೇಳೆ ಕುಂದಾಪುರ ಕಡೆಯಿಂದ ಉಡುಪಿ ಕಡೆಗೆ ಹೋಗುತ್ತಿದ್ದ ಬುಲೆರೋ ಜೀಪು ಜಯಲಕ್ಷ್ಮೀ ಭಟ್‌ಗೆ ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಇದರಿಂದ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡ ಇವರು, ಮಣಿಪಾಲ ಆಸ್ಪತ್ರೆಯಲ್ಲಿ ಮಧ್ಯಾಹ್ನ 12:45ರ ಸುಮಾರಿಗೆ ಮೃತಪಟ್ಟರೆಂದು ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 
 
 
 
 
 
 
 
 
 
 

Leave a Reply