ಕಾಪು: ಬಸ್ಸು ಢಿಕ್ಕಿ ಹೊಡೆದು ಬಾಲಕಿ ಮೃತ್ಯು!

ಕಾಪು: ಖಾಸಗಿ ಎಕ್ಸ್ ಪ್ರೆಸ್ ಬಸ್ ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡ ಪಾದಚಾರಿ  ಹೈಸ್ಕೂಲ್‌ ವಿದ್ಯಾರ್ಥಿನಿ  ಆಸ್ಫತ್ರೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟ ಘಟನೆ  ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾಪು ಬಳಿ ಮಾ 11 ರಂದು ಬೆಳಿಗ್ಗೆ ಘಟಿಸಿದೆ.  ಕಾಪು ಮಹಾದೇವಿ ಪ್ರೌಢಶಾಲೆಯ 8ನೇ ತರಗತಿ ವಿದ್ಯಾರ್ಥಿನಿ ವರ್ಷಿತಾ(13) ಮೃತಪಟ್ಟ ಬಾಲಕಿ.

ಇಂದು ಬೆಳಗ್ಗೆ ಶಾಲೆಗೆ ತೆರಳುತ್ತಿದ್ದ ವರ್ಷಿತಾ ರಾಷ್ಟ್ರೀಯ ಹೆದ್ದಾರಿ 66ರ ಮಂದಾರ ಹೊಟೇಲ್ ಬಳಿ ರಸ್ತೆ ದಾಟಲು ನಿಂತಿದ್ದಳು. ಈ  ವೇಳೆ ಉಡುಪಿಯಿಂದ ಮಂಗಳೂರಿನತ್ತ ತೆರಳುತ್ತಿದ್ದ ಖಾಸಗಿ ಎಕ್ಸ್ ಪ್ರೆಸ್ ಬಸ್ ಅತೀ ವೇಗದಿಂದ ಬಂದು ವರ್ಷಿತಾಳಿಗೆ ಡಿಕ್ಕಿ ಹೊಡೆದಿದೆ.

ಅಪಘಾತದ ರಭಸಕ್ಕೆ ರಸ್ತೆಗೆ ಎಸೆಯಲ್ಪಟ್ಟ ಬಾಲಕಿಯ ತಲೆಗೆ ತೀವ್ರ ಗಾಯಾಗಳಾಗಿತ್ತು.  ತಕ್ಷಣ  ಬಾಲಕಿಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತಾದರೂ,  ದಾರಿಮಧ್ಯೆ ಆಕೆ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ. ಬಸ್ಸನ್ನು ವಶಕ್ಕೆ ಪಡೆದಿರುವ ಕಾಪು ಪೊಲೀಸರು, ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

 
 
 
 
 
 
 
 
 
 
 

Leave a Reply