ಎರಡು ಕಾರುಗಳ ನಡುವೆ ಭೀಕರ ಅಪಘಾತ; ಮಗು ಸೇರಿದಂತೆ ನಾಲ್ವರು ಸಾವು!

ತೂಫಾನ್ ಮತ್ತು ಆಲ್ಟೋ ಕಾರಿನ ನಡುವೆ ಅಪಘಾತ ಸಂಭವಿಸಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕಡಬದ ನೆಟ್ಟಣದಲ್ಲಿ ನಡೆದಿದೆ.
 
ಎರಡು ಕಾರುಗಳ ಮುಖಾಮುಖಿ ಅಪಘಾತದಲ್ಲಿ ನಾಲ್ವರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ಗಾಯಳುಗಳನ್ನು ಕೂಡಲೇ ಪುತ್ತೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ. 
ಕಡಬ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹಗಳನ್ನು ಸಮೀಪದ ಶವಗಾರಕ್ಕೆ ರವಾನಿಸಿದ್ದಾರೆ ಎಂದು ತಿಳಿದು ಬಂದಿದೆ. ಮೃತಪಟ್ಟವರ ಹಾಗೂ ಗಾಯಾಳುಗಳ ವಿವರ ಇನ್ನಷ್ಟೇ ಲಭಿಸಬೇಕಾಗಿದೆ.  
 
 
 
 
 
 
 
 
 
 
 

Leave a Reply