ಕಡಬ: ಖಾಸಗಿ‌ ಬಸ್ ಹಾಗೂ ಕಾರಿನ ಮಧ್ಯೆ ಅಪಘಾತ: ಚಾಲಕನಿಗೆ ಗಾಯ

ಖಾಸಗಿ ಬಸ್ ಹಾಗೂ ಇನೋವಾ ಕಾರಿನ  ಮಧ್ಯೆ ಅಪಘಾತ ಸಂಭವಿಸಿ ಕಾರು‌ ಚಾಲಕ ಗಾಯಗೊಂಡಿರುವ ಘಟನೆ ಕಡಬ ಕೋಡಿಂಬಾಳ ತಿರುವಿನಲ್ಲಿ  ಇಂದು ಬೆಳಗ್ಗೆ ನಡೆದಿದೆ.

ಪಂಜ ಕಡೆಗೆ ಹೋಗುತ್ತಿದ್ದ ಇನೋವಾ ಕಾರು ಹಾಗೂ ಬೆಂಗಳೂರಿನಿಂದ ಪಂಜ ಮಾರ್ಗವಾಗಿ  ಕಡಬಕ್ಕೆ ಬರುತ್ತಿದ್ದ ಸುಗಮ ಸಂಸ್ಥೆಗೆ ಸೇರಿದ ಬಸ್ ನಡುವೆ  ಅಪಘಾತ ಸಂಭವಿಸಿದ್ದು ಕಾರು ಚಾಲಕ ಲೋಲಾಕ್ಷ ಎಂಬವರು ಗಾಯಗೊಂಡಿದ್ದಾರೆ. ಅವರನ್ನು ಕಡಬ ಸಮುದಾಯ ಆಸ್ಪತ್ರೆಗೆ ದಾಖಲಿಸಲಾಗಿದೆ.

 
 
 
 
 
 
 
 
 
 
 

Leave a Reply