ಆದರ್ಶ ಆಸ್ಪತ್ರೆಯಲ್ಲಿ ವೈದ್ಯರಿಗೆ ಸನ್ಮಾನ ಸಮಾರಂಭ

ಜುಲೈ 1 ವೈದ್ಯರ ದಿನದ ಪ್ರಯುಕ್ತ ಉಡುಪಿಯ ಆದರ್ಶ ಆಸ್ಪತ್ರೆಯಲ್ಲಿ ದಿನಾಂಕ ೦7/೦7/2024 ಭಾನುವಾರ ಬೆಳಿಗ್ಗೆ 9:30ಕ್ಕೆ ವೈದ್ಯರಿಗೆ ಸನ್ಮಾನ ಕರ‍್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಈ ಸಂದರ್ಭದಲ್ಲಿ ಗ್ರಾಮೀಣ ಪ್ರದೇಶದಲ್ಲಿ ಸೇವೆ ನೀಡಿದ ಐದು ವೈದ್ಯರನ್ನು ಸನ್ಮಾನಿಸಲಾಗುವುದು. ಕಾಪುವಿನ ಪ್ರಶಾಂತ್ ಅಸ್ಪತ್ರೆಯ ವೈದ್ಯಕೀಯ ನಿರ್ದೇಶಕರಾದ ಡಾ| ಪ್ರಶಾಂತ್ ಕುಮಾರ್ ಶೆಟ್ಟಿ, ಮಲ್ಪೆಯ ದೇವ್ ಕ್ಲಿನಿಕ್‌ನ ಡಾ| ರಾಮಚಂದ್ರ ದೇವಾಡಿಗ, ಬ್ರಹ್ಮಾವರದ ಡಾ| ಪ್ರವೀಣ್ ಕುಮಾರ್ ಶೆಟ್ಟಿ, ಕಾರ್ಕಳ ತಾಲೂಕು ಸರಕಾರಿ ಆಸ್ಪತ್ರೆಯ ರೇಡಿಯಾಲಾಜಿಸ್ಟ್ ಡಾ| ಅನಿತಾ ಎಸ್ ಪ್ರಭು ಹಾಗೂ ಕುಂದಾಪುರ ತಾಲೂಕು ಸರಕಾರಿ ಆಸ್ಪತ್ರೆಯ ಹೆರಿಗೆ ಮತ್ತು ಸ್ತಿçà ರೋಗ ತಜ್ಞರಾದ ಡಾ| ಚಂದ್ರ ಮರಕಾಲ ಇವರು ವೈದ್ಯಕೀಯ ಕ್ಷೇತ್ರದಲ್ಲಿ ನೀಡಿದ ವಿಶೇಷ ಸೇವೆಯನ್ನು ಪರಿಗಣಿಸಿ ವೈದ್ಯರ ದಿನಾಚರಣೆಯ ಪ್ರಯುಕ್ತ ಆದರ್ಶ ಆಸ್ಪತ್ರೆಯ ಪರವಾಗಿ ಅಭಿನಂದಿಸಿ ಸನ್ಮಾನಿಸಲಾಗುವುದು.

 
 
 
 
 
 
 
 

Leave a Reply